ಉಳ್ಳಾಲ : ತಾಲೂಕಿನ ಚೋಟಾ ಮಂಗಳೂರು ಭಗವತಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅಕ್ಕರೆ ಕೆರೆ ನಿವಾಸಿ ಮುಹಮ್ಮದ್ ಶಾಝಿಲ್ (29) ಎಂದು ಗುರುತಿಸಲಾಗಿದೆ. ಈತನನ್ನು ಬಂಧಿಸಿರುವ ಪೊಲೀಸರು ಕಳವುಗೈದ ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ. ಚೋಟ ಮಂಗಳೂರು ನಿವಾಸಿ ನರೇಂದ್ರ ಕುಮಾರ್ ಅವರು ತನ್ನ ಆಟೋ ರಿಕ್ಷಾವನ್ನು ತನ್ನ ಮನೆಯ ಕಂಪೌಂಡ್ ನ ಹೊರಗಡೆ ಇರುವ ಭಗವತಿ ರಸ್ತೆಯಲ್ಲಿ ಡಿ.13ರಂದು ರಾತ್ರಿ ನಿಲ್ಲಿಸಿದ್ದರು.
ಈ ರಿಕ್ಷಾವು ಕಳವಾಗಿದ್ದು, ಈ ಘಟನೆ ಡಿ.14 ರಂದು ಬೆಳಿಗ್ಗೆ ಬೆಳಕಿಗೆ ಬಂದಿತ್ತು. ಈ ಬಗ್ಗೆ ಅವರು ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಡಿ.19ರಂದು ಈ ಕುರಿತು ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…