ಉಳ್ಳಾಲ : ಆಧಾರ ಕಾರ್ಡ್ ತೋರಿಸಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ನಲ್ಲಿ ಶಾಲೆಗೆ ತೆರಳುತ್ತಿದ್ದ ಐವರು ಪ್ರಾಥಮಿಕ ಶಾಲಾ ವಿಧ್ಯಾರ್ಥಿನಿಯ ರನ್ನು ಬಸ್ ಕಂಡಕ್ಟರ್ ಅರ್ಧ ದಾರಿಯಲ್ಲೇ ಕೆಳಗಿಳಿಸಿದ ಘಟನೆ ನಡೆದಿದ್ದು, ಸುದ್ದಿ ತಿಳಿಯುತ್ತಿದ್ದ ಸ್ಥಳೀಯರು ಕುಂಪಲದಲ್ಲಿ ಬಸ್ ತಡೆದು ನಿರ್ವಾಹಕನನ್ನು ತರಾಟೆ ತೆಗೆದುಕೊಂಡಿದ್ದಾರೆ.
‘ಮಂಗಳೂರು–ಕುಂಪಲ ನಡುವೆ ಸಂಚರಿಸುವ ಕೆಎಸ್‌ಆರ್‌ಟಿಸಿ ನಗರ ಸಾರಿಗೆಯ ಬಸ್‌ನಲ್ಲಿ ಕುಂಪಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡನೇ ಮತ್ತು ಮೂರನೇ ತರಗತಿಯ ಐವರು ವಿದ್ಯಾರ್ಥಿನಿಯರು ಶಾಲೆಗೆ ಹೊರಟಿದ್ದರು. ಮಕ್ಕಳು ಆಧಾರ್ ಕಾರ್ಡ್ ತೋರಿಸದ ಹಿನ್ನಲೆ ಬಸ್‌ನ ನಿರ್ವಾಹಕ ಹುಸೇನ್ ಸಾಬ್ ಐ ಹಳ್ಳೂರ ಅವರು, ‘ಆಧಾರ್ ಕಾರ್ಡ್ ತೋರಿಸದಿದ್ದರೆ ಉಚಿತ ಪ್ರಯಾಣಕ್ಕೆ ನಿಮಗೆ ಅವಕಾಶ ಇಲ್ಲ’ ಎಂದು ಟಿಕೆಟ್‌ಗೆ ಹಣ ಕೇಳಿದ್ದರು. ಹಣ ನೀಡಿ ಟಿಕೆಟ್ ಪಡೆಯದ ಕಾರಣಕ್ಕೆ ಆ ಹೆಣ್ಣು ಮಕ್ಕಳನ್ನು ಬಸ್ಸಿನಿಂದ ಅರ್ಧ ದಾರಿಯಲ್ಲೇ ಕೆಳಗೆ ಇಳಿಸುವ ಮೂಲಕ ನಿರ್ವಾಹಕ ಅಮಾನವೀಯವಾಗಿ ವರ್ತಿಸಿದ್ದಾರೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಈ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯಕರು ಕುಂಪಲ ಶಾಲೆಯ ಎದುರು ಸಂಜೆ ಅದೇ ಬಸ್ ಅನ್ನು ತಡೆದು ನಿಲ್ಲಿಸಿ ನಿರ್ವಾಹಕರನ್ನು ತರಾಟೆಗೆ ತೆಗೆದುಕೊಂಡರು. ಕೆಎಸ್ಆರ್‌ಟಿಸಿ ಅಧಿಕಾರಿಗಳನ್ನು ಸಂಪರ್ಕಿಸಿದ ಅವರು, ‘ಮಕ್ಕಳ ಜೊತೆ ಮಾನವೀಯವಾಗಿ ವರ್ತಿಸಿದ ನಿರ್ವಾಹಕನ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…