Featured

ಉಳ್ಳಾಲ : ಆಧಾರ್ ಕಾರ್ಡ್ ಇಲ್ಲದ ಶಾಲಾ ಮಕ್ಕಳನ್ನು ಅರ್ಧ ದಾರಿಯಲ್ಲಿ ಇಳಿಸಿದ KSRTC ಬಸ್ ಕಂಡಕ್ಟರ್ – Vishwanews24

ಉಳ್ಳಾಲ : ಆಧಾರ್ ಕಾರ್ಡ್ ಇಲ್ಲದ ಶಾಲಾ ಮಕ್ಕಳನ್ನು ಅರ್ಧ ದಾರಿಯಲ್ಲಿ ಇಳಿಸಿದ ಕೆಎಸ್ಆರ್ ಟಿಸಿ ಬಸ್ ಕಂಡಕ್ಟರ್

ಉಳ್ಳಾಲ : ಆಧಾರ ಕಾರ್ಡ್ ತೋರಿಸಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ನಲ್ಲಿ ಶಾಲೆಗೆ ತೆರಳುತ್ತಿದ್ದ ಐವರು  ಪ್ರಾಥಮಿಕ ಶಾಲಾ ವಿಧ್ಯಾರ್ಥಿನಿಯ ರನ್ನು ಬಸ್ ಕಂಡಕ್ಟರ್ ಅರ್ಧ ದಾರಿಯಲ್ಲೇ ಕೆಳಗಿಳಿಸಿದ ಘಟನೆ ನಡೆದಿದ್ದು, ಸುದ್ದಿ ತಿಳಿಯುತ್ತಿದ್ದ ಸ್ಥಳೀಯರು ಕುಂಪಲದಲ್ಲಿ ಬಸ್ ತಡೆದು ನಿರ್ವಾಹಕನನ್ನು ತರಾಟೆ ತೆಗೆದುಕೊಂಡಿದ್ದಾರೆ.

‘ಮಂಗಳೂರು–ಕುಂಪಲ ನಡುವೆ ಸಂಚರಿಸುವ ಕೆಎಸ್‌ಆರ್‌ಟಿಸಿ ನಗರ ಸಾರಿಗೆಯ ಬಸ್‌ನಲ್ಲಿ ಕುಂಪಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡನೇ ಮತ್ತು ಮೂರನೇ ತರಗತಿಯ ಐವರು ವಿದ್ಯಾರ್ಥಿನಿಯರು ಶಾಲೆಗೆ ಹೊರಟಿದ್ದರು. ಮಕ್ಕಳು ಆಧಾರ್ ಕಾರ್ಡ್ ತೋರಿಸದ ಹಿನ್ನಲೆ ಬಸ್‌ನ ನಿರ್ವಾಹಕ ಹುಸೇನ್ ಸಾಬ್ ಐ ಹಳ್ಳೂರ ಅವರು, ‘ಆಧಾರ್ ಕಾರ್ಡ್ ತೋರಿಸದಿದ್ದರೆ ಉಚಿತ ಪ್ರಯಾಣಕ್ಕೆ ನಿಮಗೆ ಅವಕಾಶ ಇಲ್ಲ’ ಎಂದು ಟಿಕೆಟ್‌ಗೆ ಹಣ ಕೇಳಿದ್ದರು. ಹಣ ನೀಡಿ ಟಿಕೆಟ್‌ ಪಡೆಯದ ಕಾರಣಕ್ಕೆ ಆ ಹೆಣ್ಣು ಮಕ್ಕಳನ್ನು ಬಸ್ಸಿನಿಂದ ಅರ್ಧ ದಾರಿಯಲ್ಲೇ ಕೆಳಗೆ ಇಳಿಸುವ ಮೂಲಕ ನಿರ್ವಾಹಕ ಅಮಾನವೀಯವಾಗಿ ವರ್ತಿಸಿದ್ದಾರೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯಕರು ಕುಂಪಲ ಶಾಲೆಯ ಎದುರು ಸಂಜೆ ಅದೇ ಬಸ್ ಅನ್ನು ತಡೆದು ನಿಲ್ಲಿಸಿ ನಿರ್ವಾಹಕರನ್ನು ತರಾಟೆಗೆ ತೆಗೆದುಕೊಂಡರು. ಕೆಎಸ್ಆರ್‌ಟಿಸಿ ಅಧಿಕಾರಿಗಳನ್ನು ಸಂಪರ್ಕಿಸಿದ ಅವರು, ‘ಮಕ್ಕಳ ಜೊತೆ ಮಾನವೀಯವಾಗಿ ವರ್ತಿಸಿದ ನಿರ್ವಾಹಕನ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

Vishwa News 24

Recent Posts

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

21 minutes ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

33 minutes ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

37 minutes ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

44 minutes ago

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

18 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

18 hours ago