ಉಳ್ಳಾಲ : ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ಕುಂಪಲ ಹನುಮಾನ್ ನಗರದಲ್ಲಿ ಈ ಘಟನೆ ನಡೆದಿದ್ದು ಯೋಗೀಶ್(44) ಆತ್ಮಹತ್ಯೆಗೈದ ದುರ್ದೈವಿಯಾಗಿದ್ದಾರೆ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಯೋಗೀಶ್ ಇಂದು ಬೆಳಗ್ಗೆ ತಮ್ಮ ಮನೆಗೆ ತಾಗಿಕೊಂಡಿರುವ ಶೌಚಾಲಯದ ಮರದ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.
ಯೋಗೀಶ್ ಸ್ವಸಹಾಯ ಗುಂಪೊಂದರ ಸದಸ್ಯರಾಗಿದ್ದು ಸಂಘದ ನಲ್ವತ್ತು ಸಾವಿರ ರೂಪಾಯಿಗಳನ್ನ ಬ್ಯಾಂಕಿಗೆ ಕಟ್ಟದೆ ಖರ್ಚು ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ ಸಂಘದ ಉಳಿದ ಸದಸ್ಯರು ಭಾನುವಾರ ಬೆಳಗ್ಗೆ ಮತ್ತು ಸಂಜೆ ಯೋಗೀಶ್ ಅವರ ಮನೆಗೆ ತೆರಳಿ ಹಣ ಕಟ್ಟುವಂತೆ ಪೀಡನೆ ಮಾಡಿದ್ದರು ಎಂಬ ಆರೋಪ ಇದೆ.
ಇದೇ ಅವಮಾನದಲ್ಲಿ ಯೋಗೀಶ್ ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಉಳ್ಳಾಲ ಠಾಣಾ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ. ಮೃತ ಯೋಗೀಶ್ ಇಬ್ಬರು ಪುಟ್ಟ ಗಂಡು ಮಕ್ಕಳು, ಪತ್ನಿ, ತಾಯಿಯನ್ನು ಅಗಲಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…