ಉಳ್ಳಾಲ : ರಸ್ತೆ ಬದಿಯಲ್ಲಿ ಒಂದು ದಿನದ ಮಗುವನ್ನು ಬಿಟ್ಟು ಹೋಗಿರುವ ಘಟನೆ ತೊಕ್ಕೊಟ್ಟು ಕಾಪಿಕಾಡು ಅಂಬಿಕಾರೋಡಿನ ಗೇರು ಅಭಿವೃದ್ದಿ ಕೇಂದ್ರದ ಬಳಿ ನಡೆದಿದ್ದು, ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೊಕ್ಕೊಟ್ಟು ಕಾಪಿಕಾಡ್ ನಿವಾಸಿ ಅಮರ್ ಎಂಬವರ ಮನೆಯ ಎದುರುಗಡೆ ಗೇಟಿನ ಹೊರಗಡೆ ನಿಲ್ಲಿಸಿದ್ದ ಕಾರಿನ ಅಡಿಯಲ್ಲಿ ಮಗು ಪತ್ತೆಯಾಗಿದೆ. ಮನೆಮಂದಿ ಬೆಳಿಗ್ಗೆ ಏಳುವಾಗ ಮಗು ಕೂಗುತ್ತಿರುವುದನ್ನು ಗಮನಿಸಿ ಹೊರಹೋದಾಗ ಕಾರಿನ ಕೆಳಗಡೆ ಬಿಳಿ ಬಟ್ಟೆ ಯಲ್ಲಿ ಸುತ್ತಿದ ಸ್ಥಿತಿಯಲ್ಲಿ ಒಂದು ದಿನದ ಮಗು ಪತ್ತೆಯಾಗಿದೆ. ಕೂಡಲೇ ಮನೆಮಂದಿ ಉಪಚರಿಸಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸಲು ಕೇಂದ್ರ ಅನುಮೋದನೆ – Vishwanews24
ವೈದ್ಯಕೀಯ ಪರೀಕ್ಷೆ ಸಂದರ್ಭ ಒಂದು ದಿನದ ಮಗು ಎಂಬುದು ಗೊತ್ತಾಗಿದೆ. ಉಳ್ಳಾಲ ಪೊಲೀಸರು ವಿವಿಧ ಆಸ್ಪತ್ರೆಗಳಿಂದ ಮಾಹಿತಿ ಕಲೆಹಾಕುತ್ತಿದ್ದಾರೆ.
ಸದ್ಯ ಮಗುವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿರುತ್ತದೆ. ಪೊಲೀಸರು ವಿಚಾರಣೆ ಕೈಗೆತ್ತಿಕೊಂಡಿದ್ದಾರೆ ಪತ್ರಿಕಾ ಹೇಳಿಕೆಯನ್ನು ಪ್ರಕಟಿಸಿದ ನಂತರ ಹೆತ್ತವರು ಅಥವಾ ಸಂಬಂಧಿಕರು ಬಂದು ಎರಡು ತಿಂಗಳ ಒಳಗೆ ವಿಚಾರಿಸಿದಲ್ಲಿ ಅವರ ಸುಪರ್ದಿಗೆ ನೀಡಲಾಗುವುದು ಎಂದು ಬೆಂಗಳೂರು ಮಕ್ಕಳ ರಕ್ಷಣಾ ನಿರ್ದೇಶಕರು ತಿಳಿಸಿದ್ದಾರೆ.
ಮಂಗಳೂರು: ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಬಂಧನ – Vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…