Featured

ಉಳ್ಳಾಲ : ಕಾರಿನ ಹಿಂಬದಿಗೆ ಜೀಪ್ ಢಿಕ್ಕಿ – ಕಾರಿನ ಚಕ್ರ ಸಿಡಿದು ಮುಂಬದಿ ಚಲಿಸುತ್ತಿದ್ದ ಬೈಕಿಗೆ ಢಿಕ್ಕಿ ; ಸವಾರ ದಾರುಣ ಸಾವು – Vishwanews24

ಉಳ್ಳಾಲ :ಒಂದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಅತಿ ವೇಗದಿಂದ ಬಂದ ಜೀಪ್ ಢಿಕ್ಕಿ – ಕಾರಿನ ಚಕ್ರ ಸಿಡಿದು ಮುಂಬದಿ ಚಲಿಸುತ್ತಿದ್ದ ಬೈಕಿಗೆ ಢಿಕ್ಕಿ ; ಸವಾರ ದಾರುಣ ಸಾವು

ಉಳ್ಳಾಲ: ಒಂದೇ ಧಿಕ್ಕಿನಲ್ಲಿ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಥಾರ್ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು ಮುಂಬದಿ ಚಲಿಸುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದು, ಸವಾರ ಡಿವೈಡರ್ ಗೆ ಬಡಿದು ಸಾವನ್ನಪ್ಪಿದ ಘಟನೆ ರಾ.ಹೆ66 ರ ಕೊಲ್ಯ ಬ್ರಹ್ಮಶ್ರೀ ಮಂದಿರ ಎದುರುಗಡೆ ಇಂದು ಮಧ್ಯಾಹ್ನ ಸಂಭವಿಸಿದೆ. ಜೀಪಿನಲ್ಲಿದ್ದ ಯುವಕರು ಗಾಂಜಾ ನಶೆಯಲ್ಲಿದ್ದು, ಅವರ ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ ಎಂದು ಆರೋಪಿಸಿ ಸ್ಥಳೀಯರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೊಲ್ಯ ನಿವಾಸಿ ಸಂತೋಷ್ ಬೆಳ್ಚಾಡ ( 45) ಮೃತರು. ಬಾಳೆಹಣ್ಣು ವ್ಯಾಪಾರಿಯಾಗಿದ್ದ ಅವರು ಕೆಲಸ ಮುಗಿಸಿ ಮನೆ ಕಡೆಗೆ ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ಮಂಗಳೂರು ಕಡೆಯಿಂದ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯಲ್ಲಿದ್ದ ಜೀಪ್ ಎದುರಿನಲ್ಲಿ ಧರ್ಮಸ್ಥಳದಿಂದ ಕಾಞಂಗಾಡ್ ಗೆ ಕುಟುಂಬ ಸಮೇತರಾಗಿ ತೆರಳುತ್ತಿದ್ದ ಬಲೇನೋ ಕಾರಿನ ಮುಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಆಯತಪ್ಪಿದ ಕಾರು ಎದುರಿನಲ್ಲಿ ಬೈಕಿನಲ್ಲಿ ತೆರಳುತ್ತಿದ್ದ ಬೈಕ್ ಹಿಂಬದಿಗೆ ಢಿಕ್ಕಿ ಹೊಡೆದಿದೆ. ಬೈಕ್ ಡಿವೈಡರ್ ಗೆ ಬಡಿದ ಪರಿಣಾಮ ಸಂತೋಷ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ತೆರಳುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ವಿವಾಹಿತರಾಗಿದ್ದ ಸಂತೋಷ್ ಹೆತ್ತವರು, ಇಬ್ಬರು ಹೆಣ್ಮಕ್ಕಳು ಹಾಗೂ ಪತ್ನಿ ಇರುವ ಕುಟುಂಬದ ಆಧಾರಸ್ತಂಭವಾಗಿದ್ದರು.

 

Vishwa News 24

Recent Posts

ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ಅನುದಾನ ಮಂಜೂರು ಮಾಡುವಂತೆ  ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…

1 hour ago

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ – vishwanews24

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…

1 hour ago

ಉಡುಪಿ ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟಕ್ಕೆ ಲೈಸನ್ಸ್ : ಅರ್ಜಿ ಸಲ್ಲಿಸಲು ಅ.26 ಕೊನೆಯ ದಿನ – vishwanews24

ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…

2 hours ago

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ – vishwanews24

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…

2 hours ago

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ – vishwanews24

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…

2 hours ago

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ – vishwanews24

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ ಮಣಿಪಾಲ: ಕಂಪೆನಿ ಕ್ಯು ಆರ್‌ಕೋಡ್ ಬಳಸದೆ ಮರ್ಚೆಂಟ್…

2 hours ago