Featured

ಉಳ್ಳಾಲ:  ಕೆಟ್ಟು ನಿಂತಿದ್ದ ಲಾರಿಗೆ ಎರಡು ಸ್ಕೂಟರ್ ಡಿಕ್ಕಿ : ಓರ್ವ ಸವಾರ ಮೃತ್ಯು – Vishwanews24

ಉಳ್ಳಾಲ:  ಕೆಟ್ಟು ನಿಂತಿದ್ದ ಲಾರಿಗೆ ಎರಡು ಸ್ಕೂಟರ್ ಡಿಕ್ಕಿ : ಓರ್ವ ಸವಾರ ಮೃತ್ಯು

ಉಳ್ಳಾಲ: ಕೆಟ್ಟು ನಿಂತಿದ್ದ ಲಾರಿಗೆ ಎರಡು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸಾವನಪ್ಪಿರುವ ಘಟನೆ ನೇತ್ರಾವತಿ ಸೇತುವೆ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಈ ಅಪಘಾತದಲ್ಲಿ ಅಂಗರಗುಂಡಿಯ ನಿವಾಸಿ ಮುಹಮ್ಮದ್ ನೌಫಾಲ್ (26) ಮೃತಪಟ್ಟಿದ್ದರೆ, ಸಹಸವಾರ ಉಮರ್ ಫಾರೂಕ್ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ನೌಫಾಲ್ ಬೈಕಂಪಾಡಿಯ ಎಪಿಎಂಸಿಯಲ್ಲಿ ತರಕಾರಿ ಅಂಗಡಿ ಹೊಂದಿದ್ದರು. ದಿನನಿತ್ಯ ಟೆಂಪೊದಲ್ಲಿ ಕಲ್ಲಾಪಿಗೆ ಬರುವ ನೌಫಾಲ್ ಇಂದು  ಸ್ಕೂಟರಲ್ಲಿ ತರಕಾರಿ ಕೊಂಡೊಯ್ಯಲು ಬಂದಿದ್ದರು ಎನ್ನಲಾಗಿದೆ.

ಇಬ್ಬರೂ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ತರಕಾರಿ ವ್ಯಾಪಾರದ ಹಿನ್ನೆಲೆಯಲ್ಲಿ ಪಂಪ್ ವೆಲ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಸಂದರ್ಭ ವೇಳೆ ಈ ಅಪಘಾತ ಸಂಭವಿಸಿದೆ. ಒಂದು ಸ್ಕೂಟರ್ ಢಿಕ್ಕಿ ಹೊಡೆದ ಕೆಲವೇ ನಿಮಿಷಗಳಲ್ಲಿ ಇನ್ನೊಂದು ಸ್ಕೂಟರ್ ಕೂಡ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago