ಉಳ್ಳಾಲ: ಕೆಟ್ಟು ನಿಂತಿದ್ದ ಲಾರಿಗೆ ಎರಡು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸಾವನಪ್ಪಿರುವ ಘಟನೆ ನೇತ್ರಾವತಿ ಸೇತುವೆ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಈ ಅಪಘಾತದಲ್ಲಿ ಅಂಗರಗುಂಡಿಯ ನಿವಾಸಿ ಮುಹಮ್ಮದ್ ನೌಫಾಲ್ (26) ಮೃತಪಟ್ಟಿದ್ದರೆ, ಸಹಸವಾರ ಉಮರ್ ಫಾರೂಕ್ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.
ನೌಫಾಲ್ ಬೈಕಂಪಾಡಿಯ ಎಪಿಎಂಸಿಯಲ್ಲಿ ತರಕಾರಿ ಅಂಗಡಿ ಹೊಂದಿದ್ದರು. ದಿನನಿತ್ಯ ಟೆಂಪೊದಲ್ಲಿ ಕಲ್ಲಾಪಿಗೆ ಬರುವ ನೌಫಾಲ್ ಇಂದು ಸ್ಕೂಟರಲ್ಲಿ ತರಕಾರಿ ಕೊಂಡೊಯ್ಯಲು ಬಂದಿದ್ದರು ಎನ್ನಲಾಗಿದೆ.
ಇಬ್ಬರೂ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ತರಕಾರಿ ವ್ಯಾಪಾರದ ಹಿನ್ನೆಲೆಯಲ್ಲಿ ಪಂಪ್ ವೆಲ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಸಂದರ್ಭ ವೇಳೆ ಈ ಅಪಘಾತ ಸಂಭವಿಸಿದೆ. ಒಂದು ಸ್ಕೂಟರ್ ಢಿಕ್ಕಿ ಹೊಡೆದ ಕೆಲವೇ ನಿಮಿಷಗಳಲ್ಲಿ ಇನ್ನೊಂದು ಸ್ಕೂಟರ್ ಕೂಡ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…