ಉಳ್ಳಾಲ: ವಿದ್ಯುತ್ ಬಿಲ್ ಪಾವತಿಸದ ಮನೆಯೊಂದಕ್ಕೆ ಬಿಲ್ ಪರಿಶೀಲನೆಗೆ ತೆರಳಿದ ಮೆಸ್ಕಾಂ ಸಿಬ್ಬಂದಿಗೆ ಮನೆಯ ಯಜಮಾನ ಸ್ಥಳೀಯ ಕಾಂಗ್ರೆಸ್ ಮುಖಂಡನೋರ್ವ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತಿ ವ್ಯಾಪ್ತಿಯ ದೇರಳಕಟ್ಟೆ ಜಲಾಲ್ ಭಾಗ್ ಬಳಿ ಮಂಗಳವಾರ ನಡೆದಿದೆ.
ಹಲ್ಲೆಗೊಳಗಾದ ಸಿಬ್ಬಂದಿಯನ್ನು ಕೊಟೇಕಾರು ಲೈನ್ ಮನ್ ಮಧು ನಾಯಕ್ ಎಂದು ಗುರುತಿಸಲಾಗಿದೆ. ಜಲಾಲ್ ಭಾಗ್ ನ ಅಮೀರ್ ಹುಸೈನ್ ವಿದ್ಯುತ್ ಶುಲ್ಕ ಪಾವತಿಸದ ಕಾರಣಕ್ಕೆ ಮೆಸ್ಕಾಂ ಸೂಚನೆಯ ಮೇರೆಗೆ ಲೈನ್ ಮನ್ ಮಧು ಎಂಬವರು ತೆರಳಿ ಮೀಟರ್ ಪರಿಶೀಲಿಸಿ ಬಿಲ್ ಪಾವತಿಸಲು ಸೂಚಿಸಿದರು .ಈ ವಿಷಯಕ್ಕೆ ಸಂಬಂಧಪಟ್ಟಂತೆ ಮಧು ಅವರನ್ನು ತರಾಟೆಗೆ ತೆಗೆದುಕೊಂಡ ಅಮೀರ್ ಹುಸೈನ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ದಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
ಹಲ್ಲೆ ನಡೆಸಿದ ವ್ಯಕ್ತಿ ಅಮೀರ್ ತುಂಬೆ ಕಾಂಗ್ರೆಸ್ ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷರಾಗಿದ್ದಾರೆ. ಮಂಗಳೂರಿನ ಹೊರವಲಯದ ದೇರಳಕಟ್ಟೆಯಲ್ಲಿರುವ ಇವರ ನಿವಾಸಕ್ಕೆ ಮೂವರು ಮೆಸ್ಕಾಂ ಸಿಬ್ಬಂದಿಗಳು ಬಂದಿದ್ದರು. ಸಿಬ್ಬಂದಿಗಳು ವಿದ್ಯುತ್ ಬಿಲ್ ಪಾವತಿಯ ರಶೀದಿ ಕೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…
ಅಕ್ಟೋಬರ್‌ನಲ್ಲಿ ಮಂಗಳೂರು - ಕುವೈಟ್ ನೇರ ವಿಮಾನ ಆರಂಭ ಮಂಗಳೂರು: ಯುದ್ಧದಿಂದಾಗಿ 6 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕುವೈಟ್ ನೇರ…
ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ ಮೂಡುಬಿದಿರೆ: ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ…