Featured

ಉಳ್ಳಾಲ : ಕೋಟೆಕಾರ್‌ನ ರಾಷ್ಟ್ರೀಕೃತ ಬ್ಯಾಂಕ್‌ ಲಾಕರ್‌ನಲ್ಲಿದ್ದ 8 ಲಕ್ಷ ರೂ. ಗೆದ್ದಲು ಪಾಲು ! – vishwanews24

ಉಳ್ಳಾಲ : ಕೋಟೆಕಾರ್‌ನ ರಾಷ್ಟ್ರೀಕೃತ ಬ್ಯಾಂಕ್‌ ಲಾಕರ್‌ನಲ್ಲಿದ್ದ 8 ಲಕ್ಷ ರೂ. ಗೆದ್ದಲು ಪಾಲು

ಉಳ್ಳಾಲ: ಕೋಟೆಕಾರ್‌ನ ರಾಷ್ಟ್ರೀಕೃತ ಬ್ಯಾಂಕೊಂದರ ಲಾಕರ್‌ನಲ್ಲಿ ಗ್ರಾಹಕರು ಇಟ್ಟಿದ್ದ 8 ಲಕ್ಷ ರೂ. ಗೆದ್ದಲು ಪಾಲಾಗಿದೆ. ಇದಕ್ಕೆ ಬ್ಯಾಂಕಿನ ನಿರ್ವಹಣೆ ಕೊರತೆಯೇ ಕಾರಣ ಎಂದು ಹಣ ಕಳೆದುಕೊಂಡ ಗ್ರಾಹಕರು ಆರೋಪಿಸಿದ್ದಾರೆ.

ಆದರೆ ಅತ್ತ ಬ್ಯಾಂಕ್ ನವರು ಜವಾಬ್ದಾರಿಯಿಂದ ನುಣಿಚಿಕೊಳ್ಳುತ್ತಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಇದು ನಮಗೆ ಸಂಬಂಧಪಟ್ಟ ವಿಷಯವಲ್ಲ ಎಂದು ಬ್ಯಾಂಕಿನವರು ಹೇಳಿದ್ದಾರೆ. ಆರ್‌ಬಿಐ ನಿಯಮ ಪ್ರಕಾರ ಲಾಕರ್‌ನಲ್ಲಿ ಹಣ ಇರಿಸುವಂತಿಲ್ಲ. ಆದ್ದರಿಂದ ಹಣ ಗೆದ್ದಲು ಪಾಲಾಗಿರುವುದು ನಮಗೆ ಸಂಬಂಧಿಸಿದ ವಿಷಯವಲ್ಲ ಎಂದು ಬ್ಯಾಂಕ್‌ ಅಧಿಕಾರಿಗಳು ತಿಳಿಸಿದ್ದಾರೆ.

ಹಣ ಕಳೆದುಕೊಂಡವರು ಈ ಸಂಬಂಧ ಬೆಂಗಳೂರಿನ ಪ್ರಧಾನ ಕಚೇರಿಗೆ ದೂರು ನೀಡಿದ್ದು, ಹಳೆಯ ಕಟ್ಟಡ ನಿರ್ವಹಣೆ ಕೊರತೆಯಿಂದ ಸಮಸ್ಯೆಯಾಗಿದ್ದು, ಅದನ್ನು ಸರಿಪಡಿಸಬೇಕು ಎಂದು ಮನವಿ ಮಾಡಿದ್ದಾರೆ. 6 ತಿಂಗಳ ಹಿಂದೆ ಲಾಕರ್‌ನಲ್ಲಿ ಕುಟುಂಬವೊಂದು ಹಣ ಇರಿಸಿತ್ತು. ಈಗ ಅಗತ್ಯ ಉದ್ದೇಶಕ್ಕಾಗಿ ಬಳಸಲು ದುಡ್ಡು ತೆಗೆದುಕೊಂಡು ಬರಲು ಹೋಗಿದ್ದಾಗ ಎಲ್ಲ ಹಣವನ್ನೂ ಗೆದ್ದಲು ಚೂರುಚೂರು ಮಾಡಿದೆ. ಲಾಕರ್‌ ಮಳೆನೀರಿನಲ್ಲಿ ನೆನೆದ ಸ್ಥಿತಿಯಲ್ಲಿದ್ದು, ದುಡ್ಡು ಸಂಪೂರ್ಣ ಕಪ್ಪಾಗಿ ಹುಡಿ ಹುಡಿಯಾಗಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

6 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

6 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

6 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

6 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

7 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

7 hours ago