ಉಳ್ಳಾಲ: ಕೋಟೆಕಾರ್‌ನ ರಾಷ್ಟ್ರೀಕೃತ ಬ್ಯಾಂಕೊಂದರ ಲಾಕರ್‌ನಲ್ಲಿ ಗ್ರಾಹಕರು ಇಟ್ಟಿದ್ದ 8 ಲಕ್ಷ ರೂ. ಗೆದ್ದಲು ಪಾಲಾಗಿದೆ. ಇದಕ್ಕೆ ಬ್ಯಾಂಕಿನ ನಿರ್ವಹಣೆ ಕೊರತೆಯೇ ಕಾರಣ ಎಂದು ಹಣ ಕಳೆದುಕೊಂಡ ಗ್ರಾಹಕರು ಆರೋಪಿಸಿದ್ದಾರೆ.
ಆದರೆ ಅತ್ತ ಬ್ಯಾಂಕ್ ನವರು ಜವಾಬ್ದಾರಿಯಿಂದ ನುಣಿಚಿಕೊಳ್ಳುತ್ತಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಇದು ನಮಗೆ ಸಂಬಂಧಪಟ್ಟ ವಿಷಯವಲ್ಲ ಎಂದು ಬ್ಯಾಂಕಿನವರು ಹೇಳಿದ್ದಾರೆ. ಆರ್‌ಬಿಐ ನಿಯಮ ಪ್ರಕಾರ ಲಾಕರ್‌ನಲ್ಲಿ ಹಣ ಇರಿಸುವಂತಿಲ್ಲ. ಆದ್ದರಿಂದ ಹಣ ಗೆದ್ದಲು ಪಾಲಾಗಿರುವುದು ನಮಗೆ ಸಂಬಂಧಿಸಿದ ವಿಷಯವಲ್ಲ ಎಂದು ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.
ಹಣ ಕಳೆದುಕೊಂಡವರು ಈ ಸಂಬಂಧ ಬೆಂಗಳೂರಿನ ಪ್ರಧಾನ ಕಚೇರಿಗೆ ದೂರು ನೀಡಿದ್ದು, ಹಳೆಯ ಕಟ್ಟಡ ನಿರ್ವಹಣೆ ಕೊರತೆಯಿಂದ ಸಮಸ್ಯೆಯಾಗಿದ್ದು, ಅದನ್ನು ಸರಿಪಡಿಸಬೇಕು ಎಂದು ಮನವಿ ಮಾಡಿದ್ದಾರೆ. 6 ತಿಂಗಳ ಹಿಂದೆ ಲಾಕರ್‌ನಲ್ಲಿ ಕುಟುಂಬವೊಂದು ಹಣ ಇರಿಸಿತ್ತು. ಈಗ ಅಗತ್ಯ ಉದ್ದೇಶಕ್ಕಾಗಿ ಬಳಸಲು ದುಡ್ಡು ತೆಗೆದುಕೊಂಡು ಬರಲು ಹೋಗಿದ್ದಾಗ ಎಲ್ಲ ಹಣವನ್ನೂ ಗೆದ್ದಲು ಚೂರುಚೂರು ಮಾಡಿದೆ. ಲಾಕರ್ ಮಳೆನೀರಿನಲ್ಲಿ ನೆನೆದ ಸ್ಥಿತಿಯಲ್ಲಿದ್ದು, ದುಡ್ಡು ಸಂಪೂರ್ಣ ಕಪ್ಪಾಗಿ ಹುಡಿ ಹುಡಿಯಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…