ಉಳ್ಳಾಲ: ಡಿಪ್ಲೊಮಾಗೆ ಸೇರ್ಪಡೆಗೊಂಡ ಮೊದಲ ದಿನವೇ ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ವಿದ್ಯಾರ್ಥಿಯೊಬ್ಬ ಮನೆಯೊಳಗೆ ನೇಣಿಗೆ ಶರಣಾಗಿರುವ ಘಟನೆ ಕುತ್ತಾರ್ ಸುಭಾಷನಗರದಲ್ಲಿ ನಡೆದಿದೆ.
ಸುಭಾಷನಗರದ ಭಾಸ್ಕರ್ ಪೂಜಾರಿ ಮತ್ತು ಧಾಕ್ಷಾಯಿಣಿ ಎಂಬವರ ಪುತ್ರ ಸುಶಾಂತ್ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.
ಪ್ರಥಮ ಪಿಯುಸಿಯನ್ನು ಮುಗಿಸಿದ್ದ ಸುಶಾಂತ್ ಮೆಕ್ಯಾನಿಕಲ್ ಡಿಪ್ಲೊಮಾ ನಡೆಸುವ ಆಸಕ್ತಿ ವಹಿಸಿದ್ದರಿಂದ ಹೆತ್ತವರು ನಿನ್ನೆ ಕಾಲೇಜಿಗೆ ಸೇರಿಸಿದ್ದಾರೆ. ಈ ವೇಳೆ ರೂ.500 ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು. ಇಂದು ಬೆಳಿಗ್ಗೆ ಮತ್ತೆ ಕಾಲೇಜಿಗೆ ಹೋಗುವಾಗ ಖರ್ಚಿಗೆ ರೂ. 500 ಕೊಡುವಂತೆ ಕೇಳಿದಾಗ ನೀಡಿರಲಿಲ್ಲ. ಇದರಿಂದ ಕೋಪದಲ್ಲಿ ಮನೆಯಲ್ಲೇ ಉಳಿದುಕೊಂಡ ಸುಶಾಂತ್ ತಂದೆ ಮನೆ ಹೊರಗಡೆ ಹಾಗೂ ತಾಯಿ ಅಡುಗೆ ಕೋಣೆಯಲ್ಲೇ ಇದ್ದ ಸಂದರ್ಭ ಕೋಣೆಯೊಳಗೆ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಬಗ್ಗೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…