ಉಳ್ಳಾಲ : ಪಿಲಾರು ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಚಿಕ್ಕಮ್ಮನ ಮನೆಗೆ ಬಂದಿದ್ದ ಯುವಕನೋರ್ವ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪ್ರಕಾಶ್ ನಗರ ಎಂಬಲ್ಲಿ ಭಾನುವಾರ ನಡೆದಿದೆ.
ಮಂಗಳೂರು ಪಡೀಲು ನಿವಾಸಿ ಸೌರವ್ (21) ಆತ್ಮ ಹತ್ಯೆಗೈದ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮೇಶ್ವರ ಗ್ರಾಮದ ಪಿಲಾರಿನಲ್ಲಿ ಪಂಜಂದಾಯ ದೈವದ ದೊಂಪದ ಬಲಿ ಉತ್ಸವ ನಡೆಯುತ್ತಿದ್ದು, ಹೀಗಾಗಿ ಪಿಲಾರು ಪ್ರಕಾಶ್ ನಗರದ ಸುಜಾತಾ ಎಂಬವರ ಮನೆಗೆ ಪಡೀಲಿನಲ್ಲಿರುವ ಅವರ ಅಕ್ಕ, ಹಾಗೂ ಅವರ ಪುತ್ರ ಸೌರವ್ ಸೇರಿದಂತೆ ಕುಟುಂಬ ಸಮೇತ ಬಂದಿದ್ದರು.
ಜಾತ್ರೆಗೆ ತೆರಳಿ ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿದ್ದ ಸೌರವ್ ನಿದ್ದೆ ಬರುತ್ತದೆ ಎಂದು ಹೇಳಿ ಕೋಣೆಗೆ ತೆರಳಿದ್ದಾನೆನ್ನಲಾಗಿದೆ. ಸಂಜೆಯ ವೇಳೆ ತಾಯಿ ಮಗನನ್ನ ಎಬ್ಬಿಸಲು ಹೋದಾಗ ಸೌರವ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಗೈದ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಮೃತರು ತಂದೆ ತಾಯಿ ಸಹೋದರ ಸಹೋದರಿಯರನ್ನು ಅಗಲಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…