Featured

ಉಳ್ಳಾಲ : ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ – vishwanews24

ಉಳ್ಳಾಲ : ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ

ಮಂಗಳೂರು : ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಕಡಪ್ಪರ ಸಮೀರ್ ಎಂಬಾತನನ್ನು ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ತಂಡವೊಂದು ಬರ್ಬರವಾಗಿ ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ.

ರಾತ್ರಿ 10ರ ಸುಮಾರಿಗೆ ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಹಿಂಬದಿಯಿಂದ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ. ಅಪಾಯವನ್ನು ಅರಿತ ಸಮೀರ್ ತಕ್ಷಣ ಸ್ಥಳದಿಂದ ಓಡಲು ಯತ್ನಿಸಿ, ಈ ವೇಳೆ ಅಟ್ಟಾಡಿಸಿದ ಐದು ಮಂದಿಯ ತಂಡ ಕಲ್ಲಾಪು ಜಂಕ್ಷನ್ನಿನಿಂದ 500 ಮೀ ದೂರದಲ್ಲಿರುವ ವಿ.ಕೆ.ಫರ್ನಿಚರ್ ಹಿಂಭಾಗದವರೆಗೂ ಅಟ್ಟಾಡಿಸಿ, ಅಲ್ಲಿ ತಲವಾರಿನಿಂದ ಕಡಿದು ಹತ್ಯೆ ನಡೆಸಿದೆ.

2018 ರಲ್ಲಿ ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ನನ್ನು ಜೆಪ್ಪುವಿನ ಫ್ಲಾಟ್‍ವೊಂದರಲ್ಲಿ ದಾವುದ್, ಶಮೀರ್, ರಿಯಾಝ್, ನಮೀರ್ , ಅಬ್ದುಲ್ ಖಾದರ್, ಉಮ್ಮರ್ ನವಾಫ್, ಮೊಹಮ್ಮದ್ ನಝೀರ್, ನೌಷಾದ್, ಅಝ್ಗರ್ ಆಲಿ ಎಂಬವರು ಸೇರಿಕೊಂಡು ಹತ್ಯೆ ನಡೆಸಿದ್ದರು. ಪ್ರಕರಣದಲ್ಲಿ ಶಮೀರ್ ಎರಡನೇ ಆರೋಪಿಯಾಗಿದ್ದು, ದಾವುದ್ ಮತ್ತು ಶಮೀರ್ ಇಬ್ಬರು ನೇರವಾಗಿ ಫ್ಲ್ಯಾಟ್ ಪ್ರವೇಶಿಸಿ ಇಲ್ಯಾಸ್ ನನ್ನು ಹತ್ಯೆ ನಡೆಸಿರುವುದು ತನಿಖೆಯಲ್ಲಿ ಬಯಲಾಗಿತ್ತು. ಪ್ರಕರಣ ಸಂಬಂಧ ಜೈಲುಪಾಲಾದ ಶಮೀರ್ ಕೆಲ ದಿನಗಳ ಹಿಂದಷ್ಟೇ ಬಿಡುಗಡೆಗೊಂಡಿದ್ದ.

ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago