Featured

ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರ ಬಂಧನ – vishwanews24

ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರ ಬಂಧನ

ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಕೋಟೆಕಾರು ಗ್ರಾಮದ ಬಗಂಬಿಲ ಗೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ನ. 9ರಂದು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಂದ 59,300 ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್ (22) ವಿಲಾಸಿ ಜೀವನಕ್ಕಾಗಿ ತನ್ನ ಊರಿನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದನು.

ಇನ್ನೊಂದು ಪ್ರಕರಣದಲ್ಲಿ ನಾಟೆಕಲ್ ಉರುಮಣೆ ನಿವಾಸಿ ಅಬ್ದುಲ್ ಶಕೀಬ್ ಯಾನೆ ಶಾಕಿ (22) ಮತ್ತು ಪೆರ್ಮನ್ನೂರು ಗಂಡಿ ನಿವಾಸಿ ಸಬೀರ್ ಅಹಮ್ಮದ್ (24) ಎಂಬವರನ್ನು ಬಂಧಿಸಲಾಗಿದೆ. ಅಬ್ದುಲ್ ಶಕೀಬ್ ಹಾಗೂ ಸಬೀರ್ ಅಹಮ್ಮದ್, ಡ್ರೈವರ್ ಮತ್ತು ಪೈಂಟರ್ ಆಗಿದ್ದು, ಅವರು ಸ್ನೇಹಿತರಾಗಿದ್ದರು. ಶಕೀಬನು ಬಿ.ಸಿ.ರೋಡ್‌ನ ಫ್ಯಾಬೀನ್ ಎಂಬಾತನಿಂದ ಗಾಂಜಾ ಪಡೆದುಕೊಂಡು ಮಾರಾಟ ಮಾಡುತ್ತಿರುವಾಗ ಗಂಡಿ ಪ್ರದೇಶದಿಂದ ಬಂಧಿಸಿದ್ದಾರೆ. 420 ಗ್ರಾಂ ಗಾಂಜಾ, 6,000 ರೂ. ನಗದು ವಶಪಡಿಸಿಕೊಂಡಿದ್ದಾರೆ.

ಉಳ್ಳಾಲ ಠಾಣಾಧಿಕಾರಿ ವಿರೂಪಾಕ್ಷ ಸ್ವಾಮಿ ನಿರ್ದೇಶನಂತೆ ಎಸ್‌ಐ ಸಿದ್ದಪ್ಪ ನರನೂರ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿತ್ತು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

5 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

5 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

6 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

7 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

7 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

7 hours ago