ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಕೋಟೆಕಾರು ಗ್ರಾಮದ ಬಗಂಬಿಲ ಗೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ನ. 9ರಂದು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ 59,300 ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್ (22) ವಿಲಾಸಿ ಜೀವನಕ್ಕಾಗಿ ತನ್ನ ಊರಿನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದನು.
ಇನ್ನೊಂದು ಪ್ರಕರಣದಲ್ಲಿ ನಾಟೆಕಲ್ ಉರುಮಣೆ ನಿವಾಸಿ ಅಬ್ದುಲ್ ಶಕೀಬ್ ಯಾನೆ ಶಾಕಿ (22) ಮತ್ತು ಪೆರ್ಮನ್ನೂರು ಗಂಡಿ ನಿವಾಸಿ ಸಬೀರ್ ಅಹಮ್ಮದ್ (24) ಎಂಬವರನ್ನು ಬಂಧಿಸಲಾಗಿದೆ. ಅಬ್ದುಲ್ ಶಕೀಬ್ ಹಾಗೂ ಸಬೀರ್ ಅಹಮ್ಮದ್, ಡ್ರೈವರ್ ಮತ್ತು ಪೈಂಟರ್ ಆಗಿದ್ದು, ಅವರು ಸ್ನೇಹಿತರಾಗಿದ್ದರು. ಶಕೀಬನು ಬಿ.ಸಿ.ರೋಡ್‌ನ ಫ್ಯಾಬೀನ್ ಎಂಬಾತನಿಂದ ಗಾಂಜಾ ಪಡೆದುಕೊಂಡು ಮಾರಾಟ ಮಾಡುತ್ತಿರುವಾಗ ಗಂಡಿ ಪ್ರದೇಶದಿಂದ ಬಂಧಿಸಿದ್ದಾರೆ. 420 ಗ್ರಾಂ ಗಾಂಜಾ, 6,000 ರೂ. ನಗದು ವಶಪಡಿಸಿಕೊಂಡಿದ್ದಾರೆ.
ಉಳ್ಳಾಲ ಠಾಣಾಧಿಕಾರಿ ವಿರೂಪಾಕ್ಷ ಸ್ವಾಮಿ ನಿರ್ದೇಶನಂತೆ ಎಸ್‌ಐ ಸಿದ್ದಪ್ಪ ನರನೂರ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿತ್ತು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…