ಉಳ್ಳಾಲ: ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದಾಗ ತನ್ನ ಮೇಲೆ ಮೂವರು ತಲವಾರು ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ಕೆ.ಸಿ.ರೋಡ್ ನಿವಾಸಿ ಕಿಶೋರ್ (48) ಎಂಬುವರು ದೂರು ಹೇಳಿಕೊಂಡಿದ್ದು, ಪೊಲೀಸರು ತನಿಖೆ ನಡೆಸಿದಾಗ ಇಂತಹ ಯಾವುದೇ ಪ್ರಕರಣ ನಡೆಯದೇ ಇರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ದೂರುದಾರನ ವಿರುದ್ಧವೇ ಪ್ರಕರಣ ದಾಖಲಾಗಿದೆ.
ತನ್ನ ಮೇಲೆ ಹಲ್ಲೆ ಮೂವರು ತಲವಾರು ದಾಳಿ ನಡೆಸಲು ಬಂದಿದ್ದರು ಎಂದು ಕಿಶೋರ್, ಸ್ಥಳೀಯ ಅಂಗಡಿ ಮಾಲೀಕ ಮೊಹಮ್ಮದ್ ಇಸಾಕ್ ಎಂಬುವರಿಗೆ ತಿಳಿಸಿದ್ದ. ತಕ್ಷಣ ಅವರು ಅಂಗಡಿ ಬಳಿಯಿದ್ದ ಮೂವರು ಗ್ರಾಹಕರಲ್ಲಿ ಘಟನೆ ನಡೆದ ಸ್ಥಳಕ್ಕೆ ತೆರಳಿ ನೋಡುವಂತೆ ತಿಳಿಸಿದ್ದಾರೆ. ಆದರೆ ಸ್ಥಳದಲ್ಲಿ ಯಾರು ಕಂಡುಬರಲಿಲ್ಲ. ನಂತರ ಮೊಹಮ್ಮದ್ ಇಸಾಕ್ ಅವರು ಸ್ಥಳೀಯ ಮುಸ್ಲಿಂ ಯುವಕರ ಬಳಿ ಬೈಕಿನಲ್ಲೇ ಕಿಶೋರ್ ಅವರನ್ನು ಮನೆಗೆ ಬಿಟ್ಟುಬರುವಂತೆ ತಿಳಿಸಿದ್ದಾರೆ. ಮನೆಯಲ್ಲೂ ಪತ್ನಿ ಹಾಗೂ ಪುತ್ರನಲ್ಲಿ ತಲವಾರು ಹಲ್ಲೆಗೆ ಯತ್ನಿಸಿರುವ ಕಟ್ಟುಕತೆ ಹೇಳಿದ್ದು, ಅವರ ಪುತ್ರನೂ ಅಂಗಡಿ ಬಳಿಗೆ ಬಂದು ತಲವಾರು ದಾಳಿಗೆ ಯತ್ನಿಸಿರುವ ಕುರಿತು ತಿಳಿಸಿದ್ದ. ಬಳಿಕ ಸ್ಥಳೀಯರು ಪೊಲೀಸ್ ಕಂಟ್ರೋಲ್ ರೂಮಿಗೆ ಮಾಹಿತಿ ನೀಡಿದ್ದು, ತಕ್ಷಣ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ.
ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಕೊಣಾಜೆ ಮತ್ತು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನರಲ್ಲಿ ಆತಂಕ ಮೂಡಿತ್ತು. ಪೊಲೀಸ್ ಕಮಿಷನರ್ ಶಶಿಕುಮಾರ್ ಅವರೇ ಕಲ್ಲಾಪು ಪೊಲೀಸ್ ಆಯುಕ್ತರ ಕಚೇರಿಗೆ ಬಂದು, ಕಿಶೋರ್‌ನನ್ನು ವಿಚಾರಿ ಸಿದ್ದು, ಆತ ಹೇಳಿಕೆ ಬದಲಾ ಯಿಸಿದ್ದಾನೆ. ಅಲ್ಲದೆ, ಯಾವುದೇ ಘಟನೆ ನಡೆದಿಲ್ಲ ಎಂದು ಹೇಳಿ ಕೊಂಡಿದ್ದಾನೆ ಎಂದು ಉಳ್ಳಾಲ ಠಾಣಾಧಿಕಾರಿ ಸಂದೀಪ್ ತಿಳಿಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…