Featured

ಉಳ್ಳಾಲ: ತೈಲಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ; ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ – vishwanews24

ಉಳ್ಳಾಲ: ಪ್ರತಿಭಟನೆಯ ವೇಳೆ ಬಿಜೆಪಿ ಕಾರ್ಯಕರ್ತರು  ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ

ಉಳ್ಳಾಲ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ತೊಕ್ಕೊಟ್ಟಿನಲ್ಲಿ ಗುರುವಾರ ಬಿಜೆಪಿ ನಡೆಸಿದ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಜಟಾಪಟಿ ನಡೆದಿದೆ.

ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿದ್ದು, ಅದರಂತೆ ತೊಕ್ಕೊಟ್ಟಿನಲ್ಲಿ ರಸ್ತೆ ತಡೆದು ಪ್ರತಿಭಟಿಸಲು ಮುಂದಾದ ಬಿಜೆಪಿ ಮಂಗಳೂರು ಮಂಡಲದ ಯುವ ಮೋರ್ಚಾ ಅಧ್ಯಕ್ಷ ಮುರಳಿ ಕೊಣಾಜೆಯನ್ನು ರಸ್ತೆಯಿಂದ ಬದಿಗೆ ತೆರಳುವಂತೆ ಉಳ್ಳಾಲ ಠಾಣಾ ಇನ್ ಸ್ಪೆಕ್ಟರ್ ಎಚ್.ಎನ್.ಬಾಲಕೃಷ್ಣ ಸೂಚಿಸಿ ತರಾಟೆಗೈದರೆನ್ನಲಾಗಿದೆ. ಇದರಿಂದ ಆಕ್ರೋಶ ಗೊಂಡ ಬಿಜೆಪಿ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದರು. ಕೆಲ ಕಾಲ ತೀವ್ರ ಮಾತಿನ ಚಕಮಕಿಯೂ ನಡೆಯಿತು.

ತೊಕ್ಕೊಟ್ಟು ಫ್ಲೈ ಓವರ್ ಕೆಳಗಡೆ ಬಿಜೆಪಿಯು ಪ್ರತಿಭಟನಾ ಸಭೆ ಹಮ್ಮಿಕೊಂಡಿತ್ತು. ಸಭೆಯಲ್ಲಿ ಬಿಜೆಪಿಯ ಜಿಲ್ಲಾ ನಾಯಕರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ದಿನೇಶ್ ಅಮ್ಟೂರು, ಮಹೇಶ್ ಜೋಗಿ ಸೇರಿದಂತೆ ಮಂಗಳೂರು ಮಂಡಲದ ಮುಖಂಡರು ಭಾಗವಹಿಸಿದ್ದರು. ಬಳಿಕ ಸೇರಿದ್ದ ಬಿಜೆಪಿ ಕಾರ್ಯಕರ್ತರು ಸಾಂಕೇತಿಕವಾಗಿ ಹೆದ್ದಾರಿ ತಡೆಯಲು ಮುಂದಾದಾಗ ಸ್ಥಳದಲ್ಲಿ ಬಂದೋಬಸ್ತ್ ನಲ್ಲಿದ್ದ ಇನ್ ಸ್ಪೆಕ್ಟರ್ ಬಾಲಕೃಷ್ಣ ಅವರು ಯುವ ಮೋರ್ಚದ ಅಧ್ಯಕ್ಷ ಮುರಳಿ ಕೊಣಾಜೆಯನ್ನು ಶರ್ಟ್ ಕಾಲರ್ ಹಿಡಿದು ಎಳೆದಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಘಟನೆಯಿಂದ ಆಕ್ರೋಶಗೊಂಡ ಮುರಳಿ, ನನ್ನನ್ನು ತಳ್ಳಿದ್ದು ಯಾಕೆಂದು ಇನ್ ಸ್ಪೆಕ್ಟರ್ ಅವರನ್ನು ಪ್ರಶ್ನಿಸಿ ವಾಗ್ವಾದಕ್ಕಿಳಿದರು. ಇದರಿಂದ ಕೆಲ ಕಾಲ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

ಬಳಿಕ ಮಧ್ಯ ಪ್ರವೇಶಿಸಿದ ಮಂಗಳೂರು ದಕ್ಷಿಣ ಉಪವಿಭಾಗದ ಪ್ರಭಾರ ಎಸಿಪಿ ರವೀಶ್ ನಾಯ್ಕ್ ಅವರು ಬಿಜೆಪಿ ಪ್ರಮುಖರಲ್ಲಿ ಮಾತುಕತೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

2 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

4 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

4 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

4 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

5 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

5 hours ago