ಮಂಗಳೂರು : ಯುವಕನಿಗೆ ಬರ್ಬರವಾಗಿ ಹೊಟ್ಟೆ ಭಾಗಕ್ಕೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆತಡರಾತ್ರಿ ನಡೆದಿದೆ.
ಉಳ್ಳಾಲ ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಕೊಲೆಯತ್ನಕ್ಕೆ ಒಳಗಾದ ಯುವಕ ಎಂದು ಗುರುತಿಸಲಾಗಿದೆ.
ಗಂಭೀರ ಗಾಯಗೊಂಡ ಸದಕತ್ತುಲ್ಲಾ ಎಂಬ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಝಿಕ್ ಎಂಬವರು ಇನ್ನಿಬ್ಬರನ್ನು ಸೇರಿಸಿಕೊಂಡು ಕೃತ್ಯ ಎಸಗಿರುವುದಾಗಿ ಶಂಕೆ ವ್ಯಕ್ತಪಡಿಸಲಾಗುತ್ತಿದೆ. ಇಬ್ಬರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸದಕತ್ತುಲ್ಲಾ ಮನೆಯಲ್ಲಿದ್ದ ಸಂದರ್ಭ ಎದುರುಗಡೆ ಕರೆಸಿ ಚೂರಿಯಿಂದ ಹೊಟ್ಟೆ ಭಾಗಕ್ಕೆ ಇರಿಯಲಾಗಿದೆ. ತಕ್ಷಣ ಆತ ಕುಸಿದು ಬಿದ್ದಿದ್ದು, ಗಾಯಗೊಂಡ ಯುವಕನ್ನು ಮನೆಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಫಿಶ್ ಆಯಿಲ್ ಮಿಲ್ ಮಾಲೀಕರಿಂದ ಬೆದರಿಸಿ ಹಣ ಪಡೆದಿರುವ ವಿಚಾರದಲ್ಲಿ ಇಬ್ಬರ ನಡುವೆ ವೈಷಮ್ಯವಿತ್ತು. ಕೆಲ ತಿಂಗಳುಗಳ ಹಿಂದೆ ಇದೇ ವಿಚಾರಕ್ಕೆ ಸಂಬಂಧಿಸಿ ಆರೋಪಿಗಳ ಪೈಕಿ ಓರ್ವನಿಗೆ ಸದಕತ್ತುಲ್ಲಾ ತಂಡ ಹಲ್ಲೆ ನಡೆಸಿತ್ತು.ಈ ಘಟನೆ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…