Featured

ಉಳ್ಳಾಲ: ನಾನು ಮಾಡುವ ಯಾವುದೇ ಅಭಿವೃದ್ಧಿ ಕೆಲಸ ಓಟಿಗಾಗಿ ಅಲ್ಲ, ಮುಂದಿನ ತಲೆಮಾರಿಗಾಗಿ : ಯು.ಟಿ.ಖಾದರ್ – vishwanews24

ಉಳ್ಳಾಲ:  ಅಭಿವೃದ್ಧಿಯ ವಿಚಾರ ಬಂದಾಗ ಯಾವುದೇ ರಾಜಿಯಿಲ್ಲ : ಯು.ಟಿ.ಖಾದರ್

ಉಳ್ಳಾಲ: ನಾನು ಮಾಡುವ ಯಾವುದೇ ಅಭಿವೃದ್ಧಿ ಕೆಲಸ ಓಟಿಗಾಗಿ ಅಲ್ಲ, ಮುಂದಿನ ತಲೆಮಾರಿಗಾಗಿ. ಈ ಹಿನ್ನೆಲೆಯಲ್ಲಿ ಅಭಿವೃದ್ಧಿಯ ವಿಚಾರ ಬಂದಾಗ ಯಾವುದೇ ರಾಜಿಯಿಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.

ತೊಕ್ಕೊಟ್ಟಿನಿಂದ ಚೆಂಬುಗುಡ್ಡೆವರೆಗೆ ಹಾಗೂ ಅಸೈಗೋಳಿಯಿಂದ ನಡುಪದವು ತನಕ ನಿರ್ಮಾಣ ಆಗಲಿರುವ ಚತುಷ್ಪಥ ರಸ್ತೆ ಕಾಮಗಾರಿಗೆ ತೊಕ್ಕೊಟ್ಟಿನಲ್ಲಿ ಶಂಕು ಸ್ಥಾಪನಾ ಕಾರ್ಯಕ್ರಮ ನಡೆಯಿತು. ಈ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇಷ್ಟು ವರ್ಷ ಯಾವುದೇ ವ್ಯಾಪಾರಿಗಳಿಗೆ ತೊಂದರೆ ನೀಡಿಲ್ಲ, ಅಂಗಡಿ ಎದುರು ಶೀಟ್ ಎಷ್ಟು ಮುಂದಕ್ಕೆ ಹಾಕಿದರೂ ಅಡ್ಡಿಪಡಿಸಿಲ್ಲ. ಆದರೆ ರಸ್ತೆ ಅಭಿವೃದ್ಧಿ ಆಗುವಾಗ ವ್ಯಾಪಾರಿಗಳ ಸಹಕಾರ ಅಗತ್ಯ, ರಸ್ತೆ ನಿರ್ಮಾಣ ಬಳಿಕ ದುಡಿಯುವ ವರ್ಗ ರಿಕ್ಷಾ ಚಾಲಕರ ಹಿತದೃಷ್ಟಿಯಿಂದ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಉಳ್ಳಾಲ ಸ್ಮಾರ್ಟ್ ಮಾಡುವ ನಿಟ್ಟಿನಲ್ಲಿ ವಿದ್ಯುತ್ ತಂತಿಗಳನ್ನು ಮಣ್ಣಿನಡಿ ಹಾಕುವ ವ್ಯವಸ್ಥೆಗೆ 220 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ. 24 ಗಂಟೆ ಕುಡಿಯುವ ನೀರು, ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲಾಗುತ್ತಿದೆ. ಈಗಾಗಲೇ ಕ್ಷೇತ್ರದಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ 80ರಿಂದ 100 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭ ಧಾರ್ಮಿಕ ಪರಿಷತ್ ಸದಸ್ಯ ಸುರೇಶ್ ಭಟ್ನಗರ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ನಗರಸಭೆಯ ಅಧ್ಯಕ್ಷೆ ಶಶಿಕಲಾ ಚೆಂಬುಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

14 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago