ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರರೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಸೋಮವಾರ ಕೋಟೆಪುರ ಅಲಿವೆಬಾಗಿಲು ಬಳಿ ಪತ್ತೆಯಾಗಿದೆ.
ಮೃತರನ್ನು ನಾರಾಯಣ(31) ಎಂದು ಗುರುತಿಸಲಾಗಿದೆ.
ಮಂಗಳೂರು ದಕ್ಕೆಯಿಂದ ‘ಓಷನ್ ಸ್ಟಾರ್’ ಹೆಸರಿನ ಬೋಟ್ ನಲ್ಲಿ ಆ. 9ರಂದು ಮೀನುಗಾರಿಕೆಗೆ ತೆರಳುವಾಗ ಭಾರಿ ಅಲೆ ಅಪ್ಪಳಿಸಿದ ಪರಿಣಾಮ ನಾರಾಯಣ ಅವರು ಸಮುದ್ರಕ್ಕೆ ಕೊಚ್ಚಿಹೋಗಿದ್ದರು. ಘಟನೆಯ ಬಳಿಕ ದೋಣಿ ಮಾಲೀಕರು ಹಾಗೂ ಕುಟುಂಬಸ್ಥರು ಕಳೆದ ಎಂಟು ದಿನಗಳಿಂದ ನಾರಾಯಣ ಅವರಿಗಾಗಿ ತೀವ್ರ ಶೋಧ ನಡೆಸುತ್ತಿದ್ದರು. ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವೂ ದಾಖಲಾಗಿತ್ತು.
ಮೃತದೇಹದ ಮಹಜರು ಸೇರಿದಂತೆ ಕಾನೂನು ಪ್ರಕ್ರಿಯೆಗಳನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಲಾಯಿತು. ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…