Featured

ಉಳ್ಳಾಲ:  ನಾಪತ್ತೆಯಾದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ – vishwanews24

ಉಳ್ಳಾಲ:  ನಾಪತ್ತೆಯಾದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

ಉಳ್ಳಾಲ: ಕೆಲಸಕ್ಕೆ ತೆರಳಿದ್ದ ಯುವಕನೊಬ್ಬ ಮನೆಗೆ ವಾಪಸ್ಸಾಗದೆ ಕಾಣೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ.

ಕೊಣಾಜೆ ಗ್ರಾಮ ಮುಚ್ಚಿಲಕೋಡಿ ಮನೆ ನಿವಾಸಿ ದಿನೇಶ್ ಶೆಟ್ಟಿಗಾರ್ ಎಂಬವರ ಪುತ್ರ ವಿವೇಕ್ ಶೆಟ್ಟಿಗಾರ್ (32) ಮೃತದೇಹ ಪತ್ತೆಯಾಗಿದೆ.

ಸೋಮೇಶ್ವರ ಕೆರೆಯಲ್ಲಿ ವಿವೇಕ್ ಶೆಟ್ಟಿಗಾರ್ ಅವರ ಮೃತದೇಹ ಪತ್ತೆಯಾಗಿದೆ. ಮಾಹಿತಿ ಪ್ರಕಾರ, ನಾಪತ್ತೆಯಾದ ದಿನವೇ ವಿವೇಕ್ ತಮ್ಮ ಸ್ಕೂಟರನ್ನು ಸೋಮೇಶ್ವರ ರಥದ ಕೊಠಡಿ ಸಮೀಪ ನಿಲ್ಲಿಸಿದ್ದು ಕಂಡುಬಂದಿದೆ. ಅಲ್ಲಿಯೇ ಅವರ ಮೊಬೈಲ್ ಫೋನ್ ಹಾಗೂ ಚಪ್ಪಲಿಗಳನ್ನು ಇಟ್ಟು ಅವರು ಕಾಣೆಯಾಗಿರುವುದು ತಿಳಿದುಬಂದಿದೆ.

ಇದನ್ನೂ ಓದಿ:

ವಿವೇಕ್ ಶೆಟ್ಟಿಗಾರ್ ಅವರು ಸುಮಾರು ಎಂಟು ತಿಂಗಳ ಹಿಂದೆ ತಮ್ಮ ಪತ್ನಿಗೆ ವಿಚ್ಛೇದನ ನೀಡಿದ್ದರೆಂದು ಮೂಲಗಳು ತಿಳಿಸಿವೆ.

ದೂರಿನ ಪ್ರಕಾರ, ವಿವೇಕ್ ಶೆಟ್ಟಿಗಾರ್ ಅವರು ಮಂಗಳೂರಿನ ಕದ್ರಿ ಬಳಿ ಇರುವ ವೇದ ಮೊರ್ಟಾಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಪ್ರತಿದಿನ ಬೆಳಿಗ್ಗೆ 11 ಗಂಟೆಗೆ ಕೆಲಸಕ್ಕೆ ತೆರಳಿ ರಾತ್ರಿ 9 ಗಂಟೆಗೆ ಮನೆಗೆ ವಾಪಸ್ಸಾಗುತ್ತಿದ್ದರು. ಅದರಂತೆ ಮಾರ್ಚ್ 9ರಂದು ಬೆಳಿಗ್ಗೆ 11 ಗಂಟೆಗೆ ಕೆಲಸಕ್ಕೆ ತೆರಳಿದ್ದ ವಿವೇಕ್ ರಾತ್ರಿ ಸುಮಾರು 9.30ಕ್ಕೆ ತಾಯಿಗೆ ದೂರವಾಣಿ ಕರೆ ಮಾಡಿ ದೇವಸ್ಥಾನಕ್ಕೆ ಹೋಗುತ್ತಿರುವುದಾಗಿ ತಿಳಿಸಿ ಮನೆಗೆ ಬರಲು ತಡವಾಗಬಹುದು, ನನ್ನಿಗಾಗಿ ಕಾಯಬೇಡಿ ಎಂದು ಹೇಳಿದ್ದರು.

ಆದರೆ ರಾತ್ರಿ 12 ಗಂಟೆಯಾದರೂ ಮನೆಗೆ ವಾಪಸ್ಸಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅವರ ಮೊಬೈಲ್‌ಗೆ ಕರೆ ಮಾಡಿದರೂ ಅವರು ಕರೆ ಸ್ವೀಕರಿಸಿಲ್ಲ. ಮರುದಿನ ಮಾರ್ಚ್ 10ರಂದು ಕೂಡ ಮೊಬೈಲ್‌ಗೆ ಕರೆ ಮಾಡಿದಾಗ ಸಂಪರ್ಕವಾಗಿರಲಿಲ್ಲ. ಬಳಿಕ ವಿವೇಕ್ ಕೆಲಸ ಮಾಡುತ್ತಿದ್ದ ಕಂಪೆನಿಗೆ ಕರೆ ಮಾಡಿ ವಿಚಾರಿಸಿದಾಗ ಕಂಪೆನಿ ಬಂದ್ ಆಗಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿ:

ನಂತರ ಕುಟುಂಬಸ್ಥರು ಹಾಗೂ ಪರಿಚಿತರ ಬಳಿ ವಿಚಾರಿಸಿದರೂ ವಿವೇಕ್ ಶೆಟ್ಟಿಗಾರ್ ಅವರ ಬಗ್ಗೆ ಯಾವುದೇ ಮಾಹಿತಿ ಸಿಗದೇ ಇದ್ದುದರಿಂದ ಅವರು ಕಾಣೆಯಾಗಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮೊ.ನಂ. 21/2026ರಂತೆ ಗಂಡಸು ಕಾಣೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago