ಉಳ್ಳಾಲ : ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಸ್ಕೂಟರೊಂದು ರಸ್ತೆ ಬದಿಯ ಮನೆಯ ಆವರಣ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಸವಾರ ಸಾವನ್ನಪ್ಪಿದ ಘಟನೆ ಆಗಸ್ಟ್ 12ರ ರಾತ್ರಿ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ ರಸ್ತೆ ಎಂಬಲ್ಲಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮೀ ಮಂದಿರ ಬಳಿಯ ನಿವಾಸಿ ರಾಘವೇಂದ್ರ ಸಾಲ್ಯಾನ್ ಯಾನೆ ರಘು (44) ಎಂದು ಗುರುತಿಸಲಾಗಿದೆ.
ಖಾಸಗಿ ಕಂಪನಿಯೊಂದರಲ್ಲಿ ಇಲೆಕ್ಟಿಕಲ್ ಗುತ್ತಿಗೆದಾರರಾಗಿದ್ದ ರಾಘವೇಂದ್ರ ರಾಘವೇಂದ್ರ ಅವರು ಆ.12ರ ರಾತ್ರಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅಂಬಿಕಾ ರಸ್ತೆಯ ನಿರ್ಮಲಾ ಟ್ರಾವೆಲ್ಸ್ ಗ್ಯಾರೇಜ್ ಬಳಿ ಈ ಅವಘಡ ನಡೆದಿದೆ.
ಘಟನೆಯಲ್ಲಿ ರಾಘವೇಂದ್ರ ಅವರ ತಲೆಯು ರಸ್ತೆ ಬದಿಯ ಆವರಣ ಗೋಡೆಗೆ ಬಡಿದು, ತೀವ್ರ ರಕ್ತಸ್ರಾವ ಉಂಟಾಗಿದೆ. ಆಂಬುಲೆನ್ಸ್ ತುರ್ತು ವಾಹನವು ಸ್ಥಳಕ್ಕೆ ಬರಲು ತಡವಾದ ಕಾರಣ ಸ್ಥಳೀಯ ಯುವಕರು ಆಟೋ ರಿಕ್ಷಾದಲ್ಲಿ ಗಾಯಾಳು ರಾಘವೇಂದ್ರ ಅವರನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ತಾಯಿ, ಪತ್ನಿ ಮತ್ತು ಏಕೈಕ ಗಂಡು ಮಗುವನ್ನ ಅಗಲಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…