ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ 24 ಪುಟಗಳ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.
ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ(25)ಆತ್ಮ ಹತ್ಯೆಗೈದ ಯುವತಿ.ನಿನ್ನೆ ರಾತ್ರಿ ಅಶ್ವಿನಿ ತನ್ನ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಲೆನ್ನಲಾಗಿದ್ದು ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದು ಬೆಳಕಿಗೆ ಬಂದಿದೆ.ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ.ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆಯಂತೆ.ಅಶ್ವಿನಿ ಸಾಮಾನ್ಯ ಕುಟುಂಬದವಲಾಗಿದ್ದು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು.ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತ ಎಂಬವರಿಂದ ಅಶ್ವಿನಿಯೆ ಮನೆಯೊಂದನ್ನ ಖರೀದಿಸಿದ್ದು ಕಳೆದ ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ ,ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರೆನ್ನಲಾಗಿದೆ.
ಡೆತ್ ನೋಟಲ್ಲಿ ಅಶ್ವಿನಿ ತನ್ನ ಪ್ರಿಯಕರನ ಹೆಸರು ಉಲ್ಲೇಖಿಸಿ ಐ ಲವ್ ಯೂ ಅಂತ ಬರೆದಿದ್ದು ತಾನು ಬಳಸುತ್ತಿದ್ದ ಐ ಫೋನನ್ನ ಆತನಿಗೆ ನೀಡಬೇಕೆಂದು ಹೇಳಿದ್ದಾಳೆ.
ಹಲವು ಸಂಕಷ್ಟಗೊಳಗಾದ ಅಶ್ವಿನಿ ಖಿನ್ನತೆಗೊಳಗಾಗಿ ಆತ್ಮ ಹತ್ಯೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.ಮೃತ ದೇಹವನ್ನ ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…