ಉಳ್ಳಾಲ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಹರೇಕಳ ಬೈತಾರ್ ನಿವಾಸಿ ಪ್ರಕಾಶ್ ಗಟ್ಟಿ (46) ಎಂಬವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ಹರೇಕಳದ ಉಳಿದೊಟ್ಟು ಬಳಿಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ನಡೆಯುತ್ತಿದ್ದು, ಅದಕ್ಕಾಗಿ ಪ್ರಕಾಶ್ ಅವರು ಸ್ನೇಹಿತರು ಹಾಗೂ ಸಂಬಂಧಿಕರನ್ನು ಮನೆಗೆ ಕರೆದಿದ್ದರು. ಸುಮಾರು 20ರಷ್ಟು ನೆಂಟರು ಸ್ನೇಹಿತರನ್ನು ಕರೆದುಕೊಂಡು ಪ್ರಕಾಶ್ ಅವರು ತಮ್ಮ ತೋಟದ ಬಳಿಯಿರುವ ನೇತ್ರಾವತಿ ನದಿ ತೀರಕ್ಕೆ ತೆರಳಿದ್ದರು. ಅಲ್ಲಿ ನದಿ ನೀರಿಗೆ ಅಡಿಕೆ ಮರವನ್ನು (ಬಂಬು) ಅಡ್ಡವಾಗಿ ಹಾಕಿದ್ದರು. ಅದರಲ್ಲಿ ನಡೆದುಕೊಂಡು ಹೋಗುವ ಸಂದರ್ಭ ಆಕಸ್ಮಿಕ ಕಾಲುಜಾರಿ ಬಿದ್ದು , ನದಿ ನೀರಿನ ಹೂಳಿನಲ್ಲಿ ಹೂತುಹೋಗಿದ್ದರು. ಈಜಲು ಪರಿಣತರಾಗಿದ್ದರೂ ಮೇಲೆ ಬರಲು ಸಾಧ್ಯವಾಗದೇ, ನದಿ ನೀರಿನಲ್ಲಿ ಮುಳುಗಿದ್ದಾರೆ.
ಸ್ಥಳೀಯ ಈಜುಗಾರರು ಅವರನ್ನು ಮೇಲಕ್ಕೆತ್ತಲು ಪ್ರಯತ್ನಿಸಿದಾಗ ಸಾಧ್ಯವಾಗದೇ ಇದ್ದಾಗ, ಉತ್ತರಪ್ರದೇಶ ಮೂಲದ ಮರಳು ತೆಗೆಯುವ ಕಾರ್ಮಿಕರು ಶೋಧ ನಡೆಸಿ ಮೇಲಕ್ಕೆ ಎತ್ತಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಪ್ರಕಾಶ್ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.
ಮೃತರು ಬೈಕಂಪಾಡಿಯ ಎಂ.ಸಿ.ಎಫ್‌ನಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಉದ್ಯೋಗದ ಜೊತೆಗೆ ಕೃಷಿ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು ಪ್ರಗತಿ ಪರ ಕೃಷಿಕರೂ ಆಗಿದ್ದರು. ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…