Featured

ಉಳ್ಳಾಲ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ವ್ಯಕ್ತಿ ಸಾವು – Vishwanews24

ಉಳ್ಳಾಲ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ವ್ಯಕ್ತಿ ಸಾವು

ಉಳ್ಳಾಲ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಹರೇಕಳ ಬೈತಾರ್ ನಿವಾಸಿ ಪ್ರಕಾಶ್ ಗಟ್ಟಿ (46) ಎಂಬವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ಹರೇಕಳದ ಉಳಿದೊಟ್ಟು ಬಳಿಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ನಡೆಯುತ್ತಿದ್ದು, ಅದಕ್ಕಾಗಿ ಪ್ರಕಾಶ್ ಅವರು ಸ್ನೇಹಿತರು ಹಾಗೂ ಸಂಬಂಧಿಕರನ್ನು ಮನೆಗೆ ಕರೆದಿದ್ದರು. ಸುಮಾರು 20ರಷ್ಟು ನೆಂಟರು ಸ್ನೇಹಿತರನ್ನು ಕರೆದುಕೊಂಡು ಪ್ರಕಾಶ್ ಅವರು ತಮ್ಮ ತೋಟದ ಬಳಿಯಿರುವ ನೇತ್ರಾವತಿ ನದಿ ತೀರಕ್ಕೆ ತೆರಳಿದ್ದರು. ಅಲ್ಲಿ ನದಿ ನೀರಿಗೆ ಅಡಿಕೆ ಮರವನ್ನು (ಬಂಬು) ಅಡ್ಡವಾಗಿ ಹಾಕಿದ್ದರು. ಅದರಲ್ಲಿ ನಡೆದುಕೊಂಡು ಹೋಗುವ ಸಂದರ್ಭ ಆಕಸ್ಮಿಕ ಕಾಲುಜಾರಿ ಬಿದ್ದು , ನದಿ ನೀರಿನ ಹೂಳಿನಲ್ಲಿ ಹೂತುಹೋಗಿದ್ದರು. ಈಜಲು ಪರಿಣತರಾಗಿದ್ದರೂ ಮೇಲೆ ಬರಲು ಸಾಧ್ಯವಾಗದೇ, ನದಿ ನೀರಿನಲ್ಲಿ ಮುಳುಗಿದ್ದಾರೆ.

ಸ್ಥಳೀಯ ಈಜುಗಾರರು ಅವರನ್ನು ಮೇಲಕ್ಕೆತ್ತಲು ಪ್ರಯತ್ನಿಸಿದಾಗ ಸಾಧ್ಯವಾಗದೇ ಇದ್ದಾಗ, ಉತ್ತರಪ್ರದೇಶ ಮೂಲದ ಮರಳು ತೆಗೆಯುವ ಕಾರ್ಮಿಕರು ಶೋಧ ನಡೆಸಿ ಮೇಲಕ್ಕೆ ಎತ್ತಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಪ್ರಕಾಶ್ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.

ಮೃತರು ಬೈಕಂಪಾಡಿಯ ಎಂ.ಸಿ.ಎಫ್‌ನಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಉದ್ಯೋಗದ ಜೊತೆಗೆ ಕೃಷಿ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು ಪ್ರಗತಿ ಪರ ಕೃಷಿಕರೂ ಆಗಿದ್ದರು. ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago