ಉಳ್ಳಾಲ: ಮುಂಭಾಗದಲ್ಲಿ ಸಂಚರಿಸುತ್ತಿದ್ದ ವಾಹನವೊಂದು ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂದಿನಲ್ಲಿದ್ದ ದ್ವಿಚಕ್ರ ವಾಹನವು ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿ ಸವಾರ ಮೃತಪಟ್ಟ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ಮುಂಜಾನೆ ನಡೆದಿದೆ.
ಮೃತ ಸವಾರನನ್ನು ಮೂಲತಃ ಉಳ್ಳಾಲದ ಪ್ರಸ್ತುತ ಕೋಟೆಕಾರ್ನಲ್ಲಿ ನಿವಾಸಿ ಅಝ್ವೀನ್ (21)ಎಂದು ಗುರುತಿಸಲಾಗಿದೆ.
ಮೀನುಗಾರಿಕೆಯ ಕೆಲಸಕ್ಕೆಂದು ತೆರಳುತ್ತಿದ್ದ ಅಝ್ವೀನ್ 3:30ರ ವೇಳೆಗೆ ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ.
ನಿಯಂತ್ರಣ ಕಳೆದುಕೊಂಡು ಮುಂಭಾಗದ ಮೀನು ಸಾಗಾಟದ ವಾಹನಕ್ಕೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದಾನೆ. ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪರೀಕ್ಷಿಸಿದ ವೈದ್ಯರು ಸವಾರ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತನಿಖೆ ನಡೆಸಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…