ಉಳ್ಳಾಲ : ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ರಾ.ಹೆ. 66 ರ ನೇತ್ರಾವತಿ ಸೇತುವೆಯಲ್ಲಿ ತಡರಾತ್ರಿ ವೇಳೆ ಸಂಭವಿಸಿದೆ.
ಬಾಗಲಕೋಟೆ ನಿವಾಸಿ ಸುರೇಶ್ (30) ಮೃತರು. ಕಲ್ಲಾಪು ಸಲಫಿ ಮಸೀದಿ ಸಮೀಪ ಕುಟುಂಬ ಸಮೇತರಾಗಿ ಹಲವು ವರ್ಷಗಳಿಂದ ಬಾಡಿಗೆಯಲ್ಲಿದ್ದರು. ಮಂಗಳೂರಿನ ಬುಲೆಟ್ ಷೋರೂಮಿನಲ್ಲಿ ಕೆಲಸಕ್ಕಿದ್ದ ಸುರೇಶ್, ಬಳಿಕ ಪಂಪ್ವೆಲ್ ಸಮೀಪ ಗ್ಯಾರೇಜ್ ನಡೆಸುತ್ತಿದ್ದರು.
ನಿನ್ನೆ ರಾತ್ರಿ ಗ್ಯಾರೇಜ್ ಕೆಲಸ ಮುಗಿಸಿ ಮನೆಯತ್ತ ವಾಪಸ್ಸಾಗುತ್ತಿದ್ದ ಸಂದರ್ಭ ತಡರಾತ್ರಿ 1.30 ಗಂಟೆ ಸುಮಾರಿಗೆ ಬೈಕ್ ಡಿವೈಡರ್ ಗೆ ಬಡಿದು ತಲೆಗೆ ಗಂಭೀರ ಗಾಯವಾಗಿ ಸಾವನ್ನಪ್ಪಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…