ಉಳ್ಳಾಲ, : ರಿಕ್ಷಾ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನೇತ್ರಾವತಿ ಸೇತುವೆಯಲ್ಲಿ ಮಾ.27 ಬೆಳಗ್ಗೆಸಂಭವಿಸಿದೆ.
ಮೃತರನ್ನು ಪಜೀರು ಸೇನೆರೆಬೈಲು ಸಂಜೀವ ಪೂಜಾರಿ ಎಂಬವರ ಪುತ್ರ ಶ್ಯಾಮಪ್ರಸಾದ್ (45)ಎಂದು ಗುರುತಿಸಲಾಗಿದೆ.
ಇವರು ಬೆಳಗ್ಗೆ ಮನೆ ಸಮೀಪದ ಬಾಡಿಗೆ ದೊರಕಿತೆಂದು ಮನೆಯಲ್ಲಿ ತಿಳಿಸಿ ಮಂಗಳೂರಿಗೆ ತೆರಳಿದ್ದರು. ಅಲ್ಲಿಂದ ವಾಪಸ್ಸಾಗುವ ಸಂದರ್ಭ ಕಾರು ಢಿಕ್ಕಿ ಹೊಡೆದಿದೆ. ಪಡೀಲ್ ಕಣ್ಣೂರಿನಿಂದ ತಲಪಾಡಿ ಶಾರದಾ ವಿದ್ಯಾ ಸಂಸ್ಥೆಗೆ ಸಹೋದರನನ್ನು ಬಿಡಲು ಬರುತ್ತಿದ್ದ ಕಾರು ಚಾಲಕ ರಿಕ್ಷಾಗೆ ಢಿಕ್ಕಿ ಹೊಡೆದಿದ್ದಾನೆ. ರಿಕ್ಷಾದ ಹಿಂಬದಿಗೆ ಕಾರು ಢಿಕ್ಕಿ ಹೊಡೆಯುತ್ತಿದ್ದಂತೆ , ಸೇತುವೆಯ ಬದಿಯಲ್ಲಿ ಅಳವಡಿಸಿದ ಗಿಂಡಿಗೆ ರಿಕ್ಷಾ ತಗಲಿ ಚಾಲಕ ಹೊರಗೆಸೆಯಲ್ಪಟ್ಟು, ಅವರ ಮೇಲೆ ಕಾರು ಚಲಿಸಿದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅಸೈಗೋಳಿ ರಿಕ್ಷಾ ಪಾರ್ಕಿನಲ್ಲಿ ರಿಕ್ಷಾ ಚಲಾಯಿಸುತ್ತಿದ್ದ ಶ್ಯಾಮಪ್ರಸಾದ್ ಕುಟುಂಬದ ಆಧಾರಸ್ತಂಭವಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಇದನ್ನೂ ಓದಿ :ಉಡುಪಿ: ಕೊರೊನಾ ಸೋಂಕು ಹೆಚ್ಚಳ ; ಎಂಐಟಿ ಕ್ಯಾಂಪಸ್ ಸೀಲ್‌ಡೌನ್ : ಕೆ.ಸುಧಾಕರ್ -Vishwanews24
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…