Featured

ಉಳ್ಳಾಲ: ಪತ್ನಿಯ ಸಂಬಂಧಿಕರ ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ನವವಿವಾಹಿತ – Vishwanews24

ಉಳ್ಳಾಲ: ಪತ್ನಿಯ ಸಂಬಂಧಿಕರ ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ನವವಿವಾಹಿತ

ಉಳ್ಳಾಲ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿಯೋರ್ವ ಪತ್ನಿಯ ಸಂಬಂಧಿಕರ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ.

ವಿಟ್ಲ ಕನ್ಯಾನ ನಿವಾಸಿ ಬಾಬು ಶೆಟ್ಟಿಗಾರ್ ಎಂಬವರ ಪುತ್ರ ಹರೀಶ್ (33) ಆತ್ಮಹತ್ಯೆ ಮಾಡಿಕೊಂಡವರು. ಇವರು 10 ವರ್ಷಗಳಿಂದ ಮುಡಿಪುವಿನ ಇನ್ಫೋಸಿಸ್ ಸಂಸ್ಥೆಯಲ್ಲಿ ಗಾರ್ಡನ್ ಕೆಲಸ ನಿರ್ವಹಿಸುತ್ತಿದ್ದರು.

ನವವಿವಾಹಿತರಾಗಿದ್ದ ಹರೀಶ್ ಅವರು ಸಿದ್ದಕಟ್ಟೆ ಸಂಗಬೆಟ್ಟು ನಿವಾಸಿಯಾಗಿದ್ದ ಯುವತಿಯನ್ನು ವಿವಾಹವಾಗಿದ್ದರು. ಇದೀಗ ಆಕೆ 7 ತಿಂಗಳ ಗರ್ಭಿಣಿಯಾಗಿದ್ದಾಳೆ.

ಮಾ.12 ರಂದು ಹರೀಶ್ ತನ್ನ ತಾಯಿಯ ಅಕ್ಕನ ಮಗನಾಗಿರುವ ಕೊಣಾಜೆ ಮುಚ್ಚಿಲಕೋಡಿ ನಿವಾಸಿ ರಮೇಶ್ ಶೆಟ್ಟಿಗಾರ್ ಎಂಬವರಿಗೆ ಕರೆ ಮಾಡಿ ತನ್ನ ಬ್ಯಾಗಿನಲ್ಲಿ ಭಸ್ಮ, ತಗಡು ದೊರೆತಿದ್ದು, ವಾಮಾಚಾರ ಮಾಡಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಹೋದರ ರಮೇಶ್ ಮಾ.19 ಭಾನುವಾರ ಮನೆಗೆ ಬಂದು ಮಾತನಾಡುವ ಎಂದು ತಿಳಿಸಿರುವಂತೆ ಹರೀಶ್ ಅವರು ಮಾತುಕತೆಗೆಂದು ಬಂದಿದ್ದರು. ಆದರೆ ಬರುವಾಗಲೇ ಕೈಯಲ್ಲಿ ಪೆಟ್ರೋಲ್ ಅನ್ನು ಕ್ಯಾನಿನಲ್ಲಿ ಹಿಡಿದುಕೊಂಡು ಬಂದಿದ್ದಾರೆ. ಮಾತುಕತೆ ಆರಂಭವಾಗುವ ಮುನ್ನವೇ ಅಂಗಳದಲ್ಲಿ ಮೈಪೂರ್ತಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನೆಮಂದಿ ಗಾಬರಿಗೊಂಡು ಕೊಣಾಜೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಣಾಜೆ ಪೊಲೀಸರು ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಹರೀಶ್ ಸಾವನ್ನಪ್ಪಿದ್ದಾರೆ. ಅರೆಬೆಂದ ಸ್ಥಿತಿಯಲ್ಲಿದ್ದ ಹರೀಶ್ ಖುದ್ದಾಗಿಯೇ ಆಂಬ್ಯುಲೆನ್ಸ್ ಹತ್ತಿದ್ದರು.

ರಮೇಶ್ ಶೆಟ್ಟಿಗಾರ್ ಹರೀಶ್ ಅವರ ಸಹೋದರನಾಗಿದ್ದರೆ, ರಮೇಶ್ ಅವರ ಪತ್ನಿಗೆ ಹರೀಶ್ ಅವರ ಪತ್ನಿ ಚಿಕ್ಕಮ್ಮನ ಮಗಳಾಗಿದ್ದಳು. ಸಂಬಂಧದ ಒಳಗಡೆ ಇಬ್ಬರಿಗೂ ವಿವಾಹ ನಡೆದಿತ್ತು. ಪತ್ನಿ ಸರಿಯಾಗಿ ಮಾತನಾಡುತ್ತಿಲ್ಲ , ಕಿವಿ ಕೇಳದಂತೆ ವರ್ತಿಸುತ್ತಾರೆ ಅನ್ನುವ ಆರೋಪವನ್ನು ಹರೀಶ್ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಆರ್ಥಿಕವಾಗಿ ಯಾವುದೇ ರೀತಿಯ ಸಂಕಷ್ಟ ಇಲ್ಲದ ಹರೀಶ್ , ಇದೇ ತಿಂಗಳ ಒಳಗೆ ಪತ್ನಿಗೆ ಸೀಮಂತ ಮಾಡುವವರಿದ್ದರು ಎಂದು ತಿಳಿದು ಬಂದಿದೆ.

 

Vishwa News 24

Recent Posts

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

56 seconds ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

14 minutes ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

26 minutes ago

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ – vishwanews24

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…

39 minutes ago

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ – vishwanews24

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ ಉಡುಪಿ : ಕಳೆದ…

56 minutes ago

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ ‘ಲೈಟ್’ ದರದಲ್ಲಿ ಸಿಗಲಿದೆ  ಭರ್ಜರಿ ಲಾಭ -vishwanews24

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ  ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…

1 hour ago