Missing red rubber stamp vector isolated
ಉಳ್ಳಾಲ: ದೇರಳಕಟ್ಟೆಯ ಖಾಸಗಿ ಕಾಲೇಜಿನ ಪಿಎಚ್‌ಡಿ ವಿದ್ಯಾರ್ಥಿನಿ ಚೈತ್ರಾ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂ ಕಮಿಷನರ್ ಮಾರ್ಗದರ್ಶನದಲ್ಲಿ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿಗಳನ್ನೊಳಗೊಂಡ ಪೊಲೀಸರ ತಂಡ ಬೆಂಗಳೂರಿನಲ್ಲಿ ತನಿಖೆಯನ್ನು ಚುರುಕುಗೊಳಿಸಿದೆ.
ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಉಳ್ಳಾಲ ಪ್ರಖಂಡ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಮುಖಂಡರು ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್ ಆಯುಕ್ತೆ ಧನ್ಯಾ ನಾಯಕ್ ಅವರಿಗೆ ಮನವಿ ಸಲ್ಲಿಸಿದೆ.
ಪಿಎಚ್‌ಡಿ ಸಂಶೋಧನ ವಿದ್ಯಾರ್ಥಿನಿಯಾಗಿದ್ದ ಚೈತ್ರಾ ಫೆ. 17ರಂದು ಮಾಡೂರಿನ ಬಾಡಿಗೆ ಮನೆಯಿಂದ ಸ್ಕೂಟರ್‌ನಲ್ಲಿ ಹೊರಟು ಸುರತ್ಕಲ್‌ನಲ್ಲಿ ಸ್ಕೂಟರ್ ತ್ಯಜಿಸಿ ನಾಪತ್ತೆಯಾಗಿದ್ದಳು. ಆರಂಭದಲ್ಲಿ ಸಾಮಾನ್ಯ ನಾಪತ್ತೆ ಪ್ರಕರಣ ಎಂದು ಪರಿಗಣಿಸಿದ್ದ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿ ಶೋಧ ಕಾರ್ಯ ನಡೆಸಿದ್ದರು. ಆದರೆ ಚೈತ್ರಾ ನಾಪತ್ತೆಯ ಹಿಂದೆ ಡ್ರಗ್ ಪೆಡ್ಲರ್ ಯುವಕನ ಕೈವಾಡವಿದೆ ಎಂದು ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸುವ ಬೆದರಿಕೆ ಹಾಕಿದಾಗ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿ ಆಕೆಯ ಮೊಬೈಲ್ ಲೊಕೇಷನ್ ಆಧಾರದಲ್ಲಿ ಬೆಂಗಳೂರು ಕಡೆ ತೆರಳಿರುವ ಮಾಹಿತಿಯನ್ನು ಕಲೆ ಹಾಕಿದ್ದರು. ಈ ನಡುವೆ ಆಕೆ ಮೆಜೆಸ್ಟಿಕ್‌ನಿಂದ ಬಸ್ ಇಳಿದು ಹೋಗಿರುವ ಮಾಹಿತಿ ಸಿಸಿಟಿವಿಯಲ್ಲಿ ಪತ್ತೆ ಹಚ್ಚಿದ್ದ ಪೊಲೀಸರು ಬೆಂಗಳೂರು ವ್ಯಾಪ್ತಿಯಲ್ಲಿ ಆಕೆಯ ಶೋಧ ಕಾರ್ಯವನ್ನು ಚುರುಕುಗೊಳಿಸಿದ್ದು, ಇನ್ನೆರಡು ದಿನಗಳಲ್ಲಿ ಆಕೆಯನ್ನು ಪತ್ತೆ ಹಚ್ಚುವ ಭರವಸೆಯನ್ನು ಪೊಲೀಸರು ಇಟ್ಟುಕೊಂಡಿದ್ದಾರೆ.
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…
ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…
ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…