ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ : ಮಂಗಳೂರು ಪೊಲೀಸ್ ಕಮಿಷನರ್​ಗೆ ಲೋಕಾಯುಕ್ತ ನೋಟಿಸ್  – Vishwanews24

Featured, ದಕ್ಷಿಣ ಕನ್ನಡ

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ : ಮಂಗಳೂರು ಪೊಲೀಸ್ ಕಮಿಷನರ್​ಗೆ ಲೋಕಾಯುಕ್ತ ನೋಟಿಸ್ 

ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆ ಮಂಗಳೂರು ಪೊಲೀಸ್ ಕಮಿಷನರ್​ಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಲಾಗಿದೆ. ಫೆಬ್ರವರಿ 14ರೊಳಗೆ ತನಿಖಾ ವರದಿ, ದಾಖಲೆ ಸಹಿತ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಉಳ್ಳಾಲ ಪೊಲೀಸ್ ಠಾಣೆಯ ಇನ್ಸ್​​ಪೆಕ್ಟರ್​ ಸಂದೀಪ್​​, ಎಸ್​ಐ ಪ್ರದೀಪ್ ವಿರುದ್ದ ಸಾಮಾಜಿಕ ಕಾರ್ಯಕರ್ತ ಉಳ್ಳಾಲದ ಮೊಹಮ್ಮದ್ ಕಬೀರ್ ಎಂಬುವವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಈ ದೂರಿನ ಆಧಾರದ ಮೇಲೆ ಲೋಕಾಯುಕ್ತರು ಮಂಗಳೂರು ಪೊಲೀಸ್ ಕಮಿಷನರ್​ಗೆ ನೋಟಿಸ್ ನೀಡಿದ್ದಾರೆ. ಹಾಗೂ ತನಿಖಾ ವರದಿ, ದಾಖಲೆ ಸಹಿತ ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ.

ಮಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣ : 13 ಮಂದಿಗೆ ಜಾಮೀನು – Vishwanews24

 

ಇನ್ಸ್​​ಪೆಕ್ಟರ್​​​, ಎಸ್​ಐ ವಿರುದ್ಧ ಹಣ ವಸೂಲಿ ಸೇರಿ ಹಲವು ಆರೋಪಗಳನ್ನು ಕಬೀರ್ ಮಾಡಿದ್ದಾರೆ. ಬ್ರೋಕರ್​​ ಹಮೀದ್ ಎಂಬುವನ ಮೂಲಕ ಹಣ ವಸೂಲಿ ಆರೋಪ. ಗಾಂಜಾ ಮಾಫಿಯಾ, ಮರಳು ಮಾಫಿಯಾಗಳಿಂದ ಹಣ ವಸೂಲಿ. ಹೋಟೆಲ್​ ಮಾಲೀಕರಿಗೆ ಹಣಕ್ಕೆ ಬೇಡಿಕೆ ಇಟ್ಟ ಆರೋಪ. ಹಾಗೂ ಇಬ್ಬರು ಅಧಿಕಾರಿಗಳು ಉಳ್ಳಾಲಕ್ಕೆ ಬಂದ ಬಳಿಕ ಕೋಟ್ಯಂತರ ಸಂಪಾದನೆ ಮಾಡಿದ್ದಾರೆ. ಚಿನ್ನದ ಅಂಗಡಿ ದರೋಡೆ ಕೇಸ್​ನಲ್ಲಿ ಜಪ್ತಿ ಮಾಡಿದ ಚಿನ್ನ ಮತ್ತು ಬೆಳ್ಳಿಯನ್ನು ಇನ್ಸ್ ಪೆಕ್ಟರ್ ಸಂದೀಪ್ ಎಗರಿಸಿದ್ದಾರೆ ಎಂದು ದೂರಿನಲ್ಲಿ ಕಬೀರ್ ಉಲ್ಲೇಖಿಸಿದ್ದಾರೆ. ಹಾಗೂ ಮಂಗಳೂರು ಪೊಲೀಸ್​ ಕಮಿಷನರ್ ವಿರುದ್ಧವೂ ಆರೋಪ ಮಾಡಿದ್ದಾರೆ. ಕಮಿಷನರ್ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡಿಲ್ಲ ಎಂದು ಆರೋಪ ಮಾಡಿದ್ದಾರೆ. ಈ ಬಗ್ಗೆ ಲೋಕಾಯುಕ್ತರಿಗೆ ಮೊಹಮ್ಮದ್ ಕಬೀರ್ ದೂರು ನೀಡಿದ್ದಾರೆ.

Surathkal Murder | ಸುರತ್ಕಲ್‌ನಲ್ಲಿ ಹತ್ಯೆ ಪ್ರಕರಣ, ಅಹಿತಕರ ಘಟನೆ ನಡೆಯದಂತೆ ಡಿ.27  ಸಂಜೆ ತನಕ ನಿಷೇಧಾಜ್ಞೆ ಜಾರಿ - ವಿಸ್ತಾರ ನ್ಯೂಸ್

ಕರ್ನಾಟಕ ಲೋಕಾಯುಕ್ತ ಕಲಂ.9 ರಡಿಯಲ್ಲಿ ತನಿಖೆ ನಡೆಸುವುದು ಸೂಕ್ತ ಎಂದು ಕರ್ನಾಟಕ ಲೋಕಾಯುಕ್ತ ನೋಟಿಸ್ ನೀಡಿದ್ದು 2023ರ ಫೆ.14 ರ ಒಳಗೆ ಸೂಕ್ತ ದಾಖಲೆಗಳೊಂದಿಗೆ ಹಾಜರಾಗಲು ಪೊಲೀಸ್ ಕಮೀಷನರ್ ಶಶಿಕುಮಾರ್ ಗೆ ನೋಟಿಸ್ ಜಾರಿ ಮಾಡಿದ್ದಾರೆ.

ದಕ್ಷಿಣಕನ್ನಡ :  ಪ್ರವೀಣ್‌ ನೆಟ್ಟಾರು ಕೊಲೆಯ ಪ್ರಮುಖ ಆರೋಪಿಗಳು ಸೌದಿಯಲ್ಲಿ ಪತ್ತೆ , ಹಂತಕರನ್ನು ಬಂಧಿಸಲು ಎನ್​ಐಎ ಮಾಸ್ಟರ್ ಪ್ಲ್ಯಾನ್​​ – Vishwanews24

Leave a Reply