ಉಳ್ಳಾಲ,: ಯುವಕನೋರ್ವ ಆತ್ಮಹತ್ಯೆ ನಡೆಸಿರುವ ಘಟನೆ ಕುತ್ತಾರು ಸಂತೋಷನಗರ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಕುದ್ಕೋರಿಗುಡ್ಡೆ ನಿವಾಸಿ ದೀಕ್ಷಿತ್ (19) ಆತ್ಮಹತ್ಯೆಗೈದವರು.
ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಯುವಕ ಒಂಟಿಯಾಗಿದ್ದ ಸಂದರ್ಭ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ದೀಕ್ಷಿತ್ ನಿನ್ನೆಯೂ ಸಂಜೆವರೆಗೆ ಕರ್ತವ್ಯ ನಿರ್ವಹಿಸಿದ್ದರು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಪ್ರೇಮವೈಫಲ್ಯ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಮೂಲತಃ ಕಂಕನಾಡಿ ಬೈಪಾಸ್ ನ ಕದ್ಕೋರಿ ಗುಡ್ಡೆಯ ದೀಕ್ಷಿತ್ ಕುಟುಂಬ ಕೆಲ ಸಮಯದಿಂದ ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದರು. ದೀಕ್ಷಿತ್ ನಿನ್ನೆ ಸಂಜೆ ತಾಯಿಯೊಂದಿಗೆ ಕುತ್ತಾರಿನ ಸಂಬಂಧಿಕರ ಮನೆಯಲ್ಲಿದ್ದು ಈ ವೇಳೆ ಮನೆಗೆ ಹೋಗಿ ಬರುತ್ತೇನೆಂದು ಓರ್ವನೇ ಸಂತೋಷ್ ನಗರದ ಬಾಡಿಗೆ ಮನೆಗೆ ತೆರಳಿದ್ದನಂತೆ. ಬಳಿಕ ಮನೆಯ ಕೋಣೆಯ ಸಿಲಿಂಗ್ ಫ್ಯಾನಿಗೆ ದೀಕ್ಷಿತ್ ನೇಣು ಬಿಗಿದು ಆತ್ಮ ಹತ್ಯೆಗೈದಿರುವುದು ರಾತ್ರಿ ವೇಳೆ ಕಂಡುಬಂದಿದೆ. ಪ್ರೇಮ ವೈಫಲ್ಯವೇ ಆತ್ಮಹತ್ಯೆಗೆ ಕಾರಣವೆಂದು ಹೇಳಲಾಗುತ್ತಿದೆ.
ಮೃತ ದೀಕ್ಷಿತ್ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದು ತಾಯಿ, ಸಹೋದರನನ್ನು ಅಗಲಿದ್ದಾನೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…