ಉಳ್ಳಾಲ: ರಾಜ್ಯದ ಹಲವೆಡೆ ಸಾವರ್ಕರ್ ಪರವಾಗಿ ಪ್ಲೆಕ್ಸ್ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ. ಕೋಮು ಸೂಕ್ಷ್ಮ ಪ್ರದೇಶ ಉಳ್ಳಾಲದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಲ್ಲಿ ಗುರುತಿಸಿಕೊಂಡಿರುವ ಮುಖಂಡ ಎ.ಆರ್. ಫಝಲ್ ಅಸೈಗೋಳಿ ಬಹಿರಂಗವಾಗಿಯೇ ಸಾವರ್ಕರ್ ಪರವಾಗಿ ಪ್ಲೆಕ್ಸ್ ಹಾಕಿದ್ದಾರೆ. ದೇರಳಕಟ್ಟೆ ಮತ್ತು ಅಸೈಗೋಳಿಯಲ್ಲಿ ಬೃಹತ್ ಪೋಸ್ಟರ್ ಹಾಕಿದ್ದು, ಸಾವರ್ಕರ್ ಅವರಿಗೆ ನಮನಗಳು ಎಂದು ಬರೆದಿದ್ದಾರೆ. ಗುರುವಾರ ಸಂಜೆ ಹೊತ್ತಿಗೆ ಎರಡೂ ಕಡೆ ಪ್ಲೆಕ್ಸ್ ಕಂಡುಬಂದಿದ್ದು ಕೆಲವರಿಂದ ವಿರೋಧವೂ ವ್ಯಕ್ತವಾಗಿತ್ತು.
ಈ ರೀತಿ ಪ್ಲೆಕ್ಸ್ ಹಾಕಿದ ಬೆನ್ನಲ್ಲೇ ಕೋಣಾಜೆ ಪೊಲೀಸರು ದೇರಳಕಟ್ಟೆಯಲ್ಲಿ ಹಾಕಿದ್ದ ಫೆಕ್ಸನ್ನು ತೆರವು ಮಾಡಿದ್ದಾರೆ. ಘರ್ಷಣೆಗೆ ಅವಕಾಶ ಮಾಡಿಕೊಡುವುದು ಬೇಡವೆಂದು ಪೊಲೀಸರೇ ತೆರವು ಕಾರ್ಯ ಮಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಪೊಲೀಸರೇ ಪ್ಲೆಕ್ಸ್ ತೆರವು ಮಾಡಿರುವುದು ಬಿಜೆಪಿ ಮುಖಂಡರನ್ನು ಕೆರಳಿಸಿದೆ.
ನಾನು ಭಯೋತ್ಪಾದಕರ ಪರವಾಗಿ ಪ್ಲೆಕ್ಸ್ ಹಾಕಿಲ್ಲ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಫಜಲ್, ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ವೀರ ಸಾವರ್ಕರ್ ಅವರಿಗೆ ನಮನ ಸಲ್ಲಿಸುವುದರಲ್ಲಿ ತಪ್ಪೇನಿದೆ. ನಾನು ಭಯೋತ್ಪಾದಕರ ಪರವಾಗಿ ಪ್ಲೆಕ್ಸ್ ಹಾಕಿಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ಒಂದು ದಿವಸ ಆಗಿರಲಿ, 50 ವರ್ಷ ಆಗಿರಲಿ, ಹೋರಾಟ ಮಾಡಿದವರೆಲ್ಲ ಪ್ರಾತಃ ಸ್ಮರಣೀಯರು. ಅಂತಹ ವ್ಯಕ್ತಿಗಳಿಗೆ ಅವಮಾನ ಮಾಡುವುದು ಸರಿಯಲ್ಲ. ಕೊಣಾಜೆ ಪೊಲೀಸರು SDPI ಕಾರ್ಯಕರ್ತರ ರೀತಿ ವರ್ತಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರು: ನಾಥೂರಾಮ್ ಗೋಡ್ಸೆ, ಸಾವರ್ಕರ್ ಬ್ಯಾನರ್ ತೆರವುಗೊಳಿಸಿದ ಪೊಲೀಸರು – Vishwanews24
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…