Featured

ಉಳ್ಳಾಲ : ಬಹಿರಂಗವಾಗಿ ಸಾವರ್ಕರ್ ಪರವಾಗಿ ಪ್ಲೆಕ್ಸ್ ಹಾಕಿದ ಫಝಲ್ ಅಸೈಗೋಳಿ  – Vishwanews24

ಬಹಿರಂಗವಾಗಿ ಸಾವರ್ಕರ್ ಪರವಾಗಿ ಪ್ಲೆಕ್ಸ್ ಹಾಕಿದ ಫಝಲ್ ಅಸೈಗೋಳಿ ..

ನಾನು ಭಯೋತ್ಪಾದಕರ ಪರವಾಗಿ ಪ್ಲೆಕ್ಸ್ ಹಾಕಿಲ್ಲ ಎಂದ ಬಿಜೆಪಿ ಅಲ್ಪಸಂಖ್ಯಾತ  ಮೋರ್ಚಾದ ಮುಖಂಡ..

ಘರ್ಷಣೆಗೆ ಅವಕಾಶ ಬೇಡವೆಂದು ಪೊಲೀಸರಿಂದ ಪ್ಲೆಕ್ಸ್ ತೆರವು..

ಉಳ್ಳಾಲ: ರಾಜ್ಯದ ಹಲವೆಡೆ ಸಾವರ್ಕರ್ ಪರವಾಗಿ ಪ್ಲೆಕ್ಸ್ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ. ಕೋಮು ಸೂಕ್ಷ್ಮ ಪ್ರದೇಶ ಉಳ್ಳಾಲದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಲ್ಲಿ ಗುರುತಿಸಿಕೊಂಡಿರುವ ಮುಖಂಡ ಎ.ಆರ್. ಫಝಲ್ ಅಸೈಗೋಳಿ ಬಹಿರಂಗವಾಗಿಯೇ ಸಾವರ್ಕರ್ ಪರವಾಗಿ ಪ್ಲೆಕ್ಸ್ ಹಾಕಿದ್ದಾರೆ. ದೇರಳಕಟ್ಟೆ ಮತ್ತು ಅಸೈಗೋಳಿಯಲ್ಲಿ ಬೃಹತ್‌ ಪೋಸ್ಟರ್ ಹಾಕಿದ್ದು, ಸಾವರ್ಕರ್ ಅವರಿಗೆ ನಮನಗಳು ಎಂದು ಬರೆದಿದ್ದಾರೆ. ಗುರುವಾರ ಸಂಜೆ ಹೊತ್ತಿಗೆ ಎರಡೂ ಕಡೆ ಪ್ಲೆಕ್ಸ್ ಕಂಡುಬಂದಿದ್ದು ಕೆಲವರಿಂದ ವಿರೋಧವೂ ವ್ಯಕ್ತವಾಗಿತ್ತು.

ಈ ರೀತಿ ಪ್ಲೆಕ್ಸ್ ಹಾಕಿದ ಬೆನ್ನಲ್ಲೇ ಕೋಣಾಜೆ ಪೊಲೀಸರು ದೇರಳಕಟ್ಟೆಯಲ್ಲಿ ಹಾಕಿದ್ದ ಫೆಕ್ಸನ್ನು ತೆರವು ಮಾಡಿದ್ದಾರೆ. ಘರ್ಷಣೆಗೆ ಅವಕಾಶ ಮಾಡಿಕೊಡುವುದು ಬೇಡವೆಂದು ಪೊಲೀಸರೇ ತೆರವು ಕಾರ್ಯ ಮಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಪೊಲೀಸರೇ ಪ್ಲೆಕ್ಸ್ ತೆರವು ಮಾಡಿರುವುದು ಬಿಜೆಪಿ ಮುಖಂಡರನ್ನು ಕೆರಳಿಸಿದೆ.

ಬ್ರಹ್ಮಗಿರಿ ಸರ್ಕಲ್ ನಲ್ಲಿ ಇದ್ದ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಬ್ಯಾನರ್ ತೆರವು ಮಾಡಿದ ಹಿಂದು ಸಂಘಟನೆ:vishwanews24

ನಾನು ಭಯೋತ್ಪಾದಕರ ಪರವಾಗಿ ಪ್ಲೆಕ್ಸ್ ಹಾಕಿಲ್ಲ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಫಜಲ್, ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ವೀರ ಸಾವರ್ಕರ್ ಅವರಿಗೆ ನಮನ ಸಲ್ಲಿಸುವುದರಲ್ಲಿ ತಪ್ಪೇನಿದೆ. ನಾನು ಭಯೋತ್ಪಾದಕರ ಪರವಾಗಿ ಪ್ಲೆಕ್ಸ್ ಹಾಕಿಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ಒಂದು ದಿವಸ ಆಗಿರಲಿ, 50 ವರ್ಷ ಆಗಿರಲಿ, ಹೋರಾಟ ಮಾಡಿದವರೆಲ್ಲ ಪ್ರಾತಃ ಸ್ಮರಣೀಯರು. ಅಂತಹ ವ್ಯಕ್ತಿಗಳಿಗೆ ಅವಮಾನ ಮಾಡುವುದು ಸರಿಯಲ್ಲ. ಕೊಣಾಜೆ ಪೊಲೀಸರು SDPI ಕಾರ್ಯಕರ್ತರ ರೀತಿ ವರ್ತಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರು: ನಾಥೂರಾಮ್ ಗೋಡ್ಸೆ, ಸಾವರ್ಕರ್ ಬ್ಯಾನರ್​​ ತೆರವುಗೊಳಿಸಿದ ಪೊಲೀಸರು – Vishwanews24

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

15 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

16 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

16 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

16 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

16 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

18 hours ago