ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ನಗರದ ಇಬ್ಬರು ಹಾಗೂ ಕೇರಳ ಮೂಲದ ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಸೋಮವಾರ ಮುಡಿಪು ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಗೊಂದಲಮಯ ವಾತಾವರಣ ನಿರ್ಮಾಣವಾಗಿದ್ದು, ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಫ್ಲಾಟ್‌ಗೆ ಭೇಟಿ ನೀಡಿ ಪರಿಶೀಲಿಸಿದರು. ಅಪ್ರಾಪ್ತ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೋಕ್ಸೊ ಕಾಯ್ದೆಯಡಿ ಅಡಿ ಪ್ರಕರಣ ದಾಖಲಿಸಲಾಗಿದೆ.
ತನ್ನ ಅಪ್ರಾಪ್ತ ಬಾಲಕಿಗೆ ಅಲ್ಕೋಹಾಲ್ ಕುಡಿಸಿ, ಅಮಲು ಪದಾರ್ಥಗಳನ್ನು ನೀಡಿ ನಂತರ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಬಾಲಕಿಯ ತಾಯಿ ದೂರು ನೀಡಿದ್ದಾರೆ. ಕೌನ್ಸೆಲಿಂಗ್‌ಗಾಗಿ ಬಾಲಕಿಯನ್ನು ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಬಂಧಿತರಲ್ಲಿ ಈಗಾಗಲೇ ಒಬ್ಬ ಆರೋಪಿ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಚಿಲಿಂಬಿಗುಡ್ಡೆಯಲ್ಲಿ ಪೋಕ್ಸೋ ಪ್ರಕರಣದ ಆರೋಪಿಯಾಗಿದ್ದಾನೆ. ಮಾತ್ರವಲ್ಲದೆ ನಾಗ ಬನ ಧ್ವಂಸ ಮಾಡಿದ ಆರೋಪ ಎದುರಿಸುತ್ತಿರುವ ವ್ಯಕ್ತಿಗಳಿಗೆ ಬೆಂಬಲವನ್ನೂ ನೀಡಿದ್ದ. ಈತನ ಮೇಲೆ ಈಗಾಗಲೇ ಎರಡು ಪೋಕ್ಸೊ ಪ್ರಕರಣಗಳು, ದರೋಡೆ ಮತ್ತು ಎನ್‌ಡಿಪಿಎಸ್ ಕಾಯ್ದೆಯಡಿ 5 ಪೊಲೀಸ್ ಠಾಣೆಯಲ್ಲಿಏಳು ಪ್ರಕರಣಗಳಿವೆ ಎಂದು ಕಮಿಷನರ್ ತಿಳಿಸಿದ್ದಾರೆ
ಚಿಲಿಂಬಿಗುಡ್ಡೆಯಲ್ಲಿ ನಡೆದ ಪ್ರಕರಣವೊಂದರಲ್ಲಿ ಬಾಲಕಿಯನ್ನು ಚುಡಾಯಿಸಲಾಗಿತ್ತು. ಈ ಸಂಬಂಧ ಆಕೆ ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ ಹೆಡ್‌ಕಾನ್ಸ್‌ಟೇಬಲ್‌ಯೊಬ್ಬರು ಆಕೆಯ ಫೋನ್ ನಂಬರ್ ಪಡೆದು ಕೆಟ್ಟ ಸಂದೇಶಗಳನ್ನು ಹಂಚಿಕೊಂಡಿದ್ದರು. ಈತನನ್ನು ವಶಕ್ಕೆ ಪಡೆದು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…