ಉಳ್ಳಾಲ : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಬಸ್ ಕ್ಲೀನರ್ ಒಬ್ಬನನ್ನು ಉಳ್ಳಾಲ ಠಾಣಾ ಪೊಲೀಸರು ಗುರುವಾರ ಬೆಳಗ್ಗೆ ಬಂಧಿಸಿದ್ದಾರೆ.
ಬಜ್ಪೆ ಕೆಂಜೂರು ನಿವಾಸಿ, ಬಸ್ ಕ್ಲೀನರ್ ಮುಹಮ್ಮದ್ ಇಮ್ರಾನ್(26) ಬಂಧಿತ ಆರೋಪಿ.
ಘಟನೆ ವಿವರ: ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕರ್ತವ್ಯದಲ್ಲಿರುವ ವೈದ್ಯೆಯೊಬ್ಬರು ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಬಸ್ ಗುರುವಾರ ಮುಂಜಾನೆ ಉಳ್ಳಾಲ ಠಾಣಾ ವ್ಯಾಪ್ತಿಗೆ ತಲುಪಿದಾಗ ಬಸ್ ಕ್ಲೀನರ್ ಮುಹಮ್ಮದ್ ಇಮ್ರಾನ್ ತಾನು ಧರಿಸಿದ್ದ ಪ್ಯಾಂಟ್ ನ ಜಿಪ್ ತೆಗೆದು ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ವೈದ್ಯೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಉಳ್ಳಾಲ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…