ಉಳ್ಳಾಲ: ಮಂಜನಾಡಿ ನಾಟೆಕಲ್ ಸಮೀಪ ನಿನ್ನೆ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂಬದಿ ಸವಾರಳಾಗಿದ್ದ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಇಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಬೋಂದೇಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ಹಳೆಯಂಗಡಿ ತೋಕೂರು ಬಸ್ ನಿಲ್ದಾಣ ಬಳಿಯ ನಿವಾಸಿ ಶ್ರೀ ನಿಧಿ (29) ನಿನ್ನೆ ಸಾವನ್ನಪ್ಪಿದ್ದು ಬೈಕ್ ಚಲಾಯಿಸುತ್ತಿದ್ದ ಯತೀಶ್ ದೇವಾಡಿಗ ಗಂಭೀರ ಗಾಯಗೊಂಡಿದ್ದರು. ಅತೀ ವೇಗದಿಂದ ಬೈಕ್ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ ಗೆ ಬಡಿದು ಅಪಘಾತ ಸಂಭವಿಸಿತ್ತು. ನಿಧಿಗೆ ಇಬ್ಬರು ಪುಟಾಣಿ ಮಕ್ಕಳಿದ್ದು ತೋಕೂರಿನ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಯತೀಶ್ ದೇವಾಡಿಗ ಪೋಷಕರಿಗೆ ಒಬ್ಬನೇ ಪುತ್ರನಾಗಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…