ಉಳ್ಳಾಲ: ಬೈಕ್ ಅಪಘಾತದಲ್ಲಿ ಇಂಟರ್ನಿ ವೈದ್ಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ಸಹ ಸವಾರ ಗಾಯಗೊಂಡಿರುವ ಘಟನೆ ಅಂಬ್ಲಮೊಗರು ಗ್ರಾಮದ ಮದಕಬಳಿ ಸೋಮವಾರ(ಡಿ.12) ತಡರಾತ್ರಿ ನಡೆದಿದೆ.
ಬೆಂಗಳೂರು ಯಶವಂತಪುರ ನಿವಾಸಿ ನಿಶಾಂತ್ (22) ಮೃತಪಟ್ಟ ವೈದ್ಯ ವಿದ್ಯಾರ್ಥಿ. ಸಹ ಸವಾರ ಬೀದರ್ ನಿವಾಸಿ ಶಕೀಬ್ ಅಪಘಾತದಲ್ಲಿ ಗಾಯಗೊಂಡಿದ್ದು, ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಬ್ಬರೂ ನಾಟೆಕಲ್ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರೈಸಿ ಇಂಟರ್ನ್ ಶಿಪ್ ಮಾಡುತ್ತಿದ್ದರು. ಕುತ್ತಾರ್ ನಲ್ಲಿರುವ ಫ್ಲ್ಯಾಟ್ ಒಂದರಲ್ಲಿ ವಾಸಿಸುತ್ತಿದ್ದ ಇಬ್ಬರೂ ರಾತ್ರಿ ಬೈಕ್ ರೈಡ್ ತೆರಳಿದ್ದ ಸಂದರ್ಭ ರಸ್ತೆಯಲ್ಲಿದ್ದ ಹಂಪ್ ಗಮನಕ್ಕೆ ಬಾರದೇ, ಬೈಕ್ ಮೇಲಕ್ಕೆ ಹಾರಿ ಇಬ್ಬರೂ ಎಸೆಯಲ್ಪಟ್ಟು, ಸವಾರ ನಿಶಾಂತ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹೆಚ್ಚು ವಾಹನ ಸಂಚಾರವಿಲ್ಲದ ರಸ್ತೆಯಾಗಿದ್ದರಿಂದ ರಾತ್ರಿ 12.15 ರ ವೇಳೆಗೆ ಅಪಘಾತ ಸಂಭವಿಸಿದ್ದರೂ 12.30 ವೇಳೆ ಸ್ಥಳೀಯರ ಗಮನಕ್ಕೆ ಬಂದು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಮೃತ ಏಕೈಕ ಪುತ್ರನಾಗಿದ್ದು, ಇನ್ನೆರಡು ತಿಂಗಳಲ್ಲಿ ನಡೆಯುವ ಘಟಿಕೋತ್ಸವದಲ್ಲಿ ವೈದ್ಯಕೀಯ ಪದವಿ ಪಡೆಯಬೇಕಿತ್ತು. ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…