Featured

ಉಳ್ಳಾಲ: ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು – Vishwanews24

ಉಳ್ಳಾಲ: ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಉಳ್ಳಾಲ : ಪಾದಚಾರಿಗೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ.

ತಲಪಾಡಿ ಹಳೆಯ ಬಸ್ಸು ತಂಗುದಾಣ ಬಳಿಯ ನಿವಾಸಿ ರಾಜೇಶ್ ಶೆಟ್ಟಿ(49)ಮೃತರು .ರಾಜೇಶ್ ಅವರಿಗೆ ತಲಪಾಡಿ ಹಳೆ ಬಸ್ಸು ತಂಗುದಾಣದ ಬಳಿ ಬೇಕರಿ ಇದ್ದು, ಎದುರಿನ ಹೆದ್ದಾರಿ ಬದಿಯಲ್ಲೇ ಮನೆಯಿದೆ. ಭಾನುವಾರದಂದು ತಲಪಾಡಿ ದೇವಿಪುರದ ರಥೋತ್ಸವ ಇದ್ದ ಹಿನ್ನಲೆ ರಾಜೇಶ್ ಅವರು ಮನೆಗೆ ಬಂದಿದ್ದ ನೆಂಟರನ್ನು ಉಪಚರಿಸಿ ಮದ್ಯಾಹ್ನ ವೇಳೆ ಬೇಕರಿಗೆ ತೆರಳಲು ಹೆದ್ದಾರಿ ದಾಟಲು ನಿಂತಿದ್ದ ವೇಳೆ ರಸ್ತೆಯ ವಿರುದ್ಧ ಧಿಕ್ಕಿನಲ್ಲಿ ಧಾವಿಸಿದ್ದ ಬೈಕ್ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ರಾಜೇಶ್ ತಲೆಗೆ ಗಂಭೀರ ಗಾಯವಾಗಿದ್ದು, ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.ಮೃತ ರಾಜೇಶ್ ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರಿದ್ದಾರೆ.ಹಿರಿಯ ಮಗಳು ಪದವಿ ಶಿಕ್ಷಣ ಪಡೆಯುತ್ತಿದ್ದು,ಕಿರಿಯ ಮಗಳು ಎಸ್ಸೆಸೆಲ್ಸಿ ಓದುತ್ತಿದ್ದು ಇದೇ ಮಾ.25 ರಂದು ನಡೆಯಲಿರುವ ಬೋರ್ಡ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು.

ರಾಜೇಶ್ ಅವರ ಅಕಾಲಿಕ ಸಾವಿಂದ ಪತ್ನಿ ,ಮಕ್ಕಳು ಆಘಾತಕ್ಕೊಳಗಾಗಿದ್ದಾರೆ.ಮೃತ ರಾಜೇಶ್ ತಲಪಾಡಿ ವೀರಾಂಜನೇಯ ವ್ಯಾಯಾಮ ಶಾಲೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು,ಬಂಟರ ಸಂಘದಲ್ಲೂ ಸಕ್ರಿಯರಾಗಿದ್ದರು.ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಘಟನೆಗೆ ಕಾರಣನಾದ ಬೈಕ್ ಸವಾರ ಮಹಮ್ಮದ್ ಸೊಹೈಲ್ ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago