ಉಳ್ಳಾಲ: ಮಸೀದಿಗಳಲ್ಲಿ ಶಸ್ತ್ರಾಸ್ತ್ರಗಳ ಸಂಗ್ರಹವಿದೆ ಎಂಬ ಹೇಳಿಕೆ ನೀಡಿರುವ ಶಾಸಕ ಹರೀಶ್ ಪೂಂಜಾರನ್ನು ಕೂಡಲೇ ಬಂಧಿಸಿ ತನಿಖೆಗೊಳಪಡಿಸಬೇಕು ಎಂದು ಮಂಗಳೂರು ಪೊಲೀಸ್ ಕಮಿಷನರ್‌ಗೆ ಉಳ್ಳಾಲ ಮೇಲಂಗಡಿ ಮೊಹಲ್ಲಾದ ಮುಸ್ಲಿಮರು ಮನವಿ ಸಲ್ಲಿಸಿದ್ದಾರೆ.
ಸಾಮಾಜಿಕ ನೇತಾರ ಫಾರೂಕ್ ಉಳ್ಳಾಲ್, ಮೇಲಂಗಡಿ ಮುಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷ ಮುಸ್ತಫಾ ಅಬ್ದುಲ್ಲಾ, ಮಸೀದಿಯ ಇಮಾಮ್ ಮೌಲಾನ ಮುಹಮ್ಮದ್ ಅಲಿ ಮದನಿಯವರ ನೇತೃತ್ವದ ನಿಯೋಗ ಮನವಿ ಸಲ್ಲಿಸಿದೆ.
ಬಿಜೆಪಿಯ ಶಾಸಕ ಹರೀಶ್ ಪೂಂಜಾ ಪದೇ ಪದೇ ಮುಸ್ಲಿಮರನ್ನು ಅವಹೇಳನ ಮಾಡುವ, ಜನಸಾಮಾನ್ಯರಲ್ಲಿ ಮುಸ್ಲಿಂ ದ್ವೇಷ ತುಂಬುವ, ಮುಸ್ಲಿಮರ ಬಗ್ಗೆ ಅಪನಂಬಿಕೆ ಮೂಡಿಸುವ ಹೀನ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಮುಸ್ಲಿಂ ಸಮಾಜದ ವಿರುದ್ಧ ಸುಳ್ಳಾರೋಪವನ್ನು ಹೊರಿಸುತ್ತಿರುವ ಹರೀಶ್ ಪೂಂಜಾರನ್ನು ಬಂಧಿಸಬೇಕು. ಜೊತೆಗೆ ಶಾಸಕ ಭರತ್ ಶೆಟ್ಟಿ, ಬಜರಂಗ ದಳದ ಶರಣ್ ಪಂಪ್‌ವೆಲ್ ಮತ್ತಿತರರು ಕೂಡಾ ಮುಸ್ಲಿಮರ ಮನುಸ್ಸುಗಳನ್ನು ಘಾಸಿಗೊಳಿಸುವ ಪ್ರಯತ್ನಕ್ಕೆ ಇಳಿದಿದ್ದಾರೆ. ಪೊಲೀಸ್ ಇಲಾಖೆಯು ಕೋಮುವಾದಿ ಶಕ್ತಿಗಳ ಪ್ರಚೋದನಾತ್ಮಕ ಹೇಳಿಕೆಗಳ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳದೇ ಲಘುವಾಗಿ ಪರಿಗಣಿಸುವುದರಿಂದಲೇ ಇವರ ಆಟಾಟೋಪ ಅಂಕೆ ಮೀರುತ್ತಿದೆ ಎಂದು ನಿಯೋಗ ಮನವಿ ಮಾಡಿಕೊಟ್ಟಿತ್ತು.
ನಿಯೋಗದಲ್ಲಿ ಪ್ರಮುಖರಾದ ನಝೀರ್ ಬಾರ್ಲಿ, ಹೊಸಪಳ್ಳಿ ಆಡಳಿತ ಸಮಿತಿಯ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಅದ್ದಾಮ, ಪ್ರಧಾನ ಕಾರ್ಯದರ್ಶಿ ಮೊಹಿಯುದ್ದೀನ್, ಆಡಳಿತ ಸಮಿತಿಯ ಪ್ರಮುಖರಾದ ರಹ್ಮಾನ್ ಹಳೆಕೋಟೆ, ಕಬೀರ್ ಬುಖಾರಿ, ಸವ್ವಾದ್ ಅಬ್ದುಲ್ಲಾ, ಮುಹಿಯುದ್ದೀನ್ ಗುಂಡಿಹಿತ್ಲು, ಹುಸೈನ್ ಮಿಲ್ಲತ್ ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…