ಉಳ್ಳಾಲ: ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಸೋಮೇಶ್ವರ ಉಚ್ಚಿಲ ಮೀನುಗಾರರ ಬಲೆಗೆ ಬಿದ್ದಿದೆ. ಸಮುದ್ರ ತಟದ ಸಮೀಪ ಬೀಸಿದ ಬಲೆಗೆ ಇಂದು ಸಂಜೆ ಹೊತ್ತಿಗೆ 75 ಕೆ.ಜಿ ಯ ಮೀನು ಬಲೆಗೆ ಬಿದ್ದಿದೆ.
ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ಸಮುದ್ರ ತೀರದಲ್ಲಿ ಹಾಕಲಾಗಿದ್ದ ಬಲೆಗೆ ಮೀನು ಬಿದ್ದಿದೆ. ಈ ವರ್ಷದ ತಮ್ಮ ಮೀನುಗಾರಿಕೆಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ ಅನ್ನುವ ಅಭಿಪ್ರಾಯ ಅವರದ್ದಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತೆ ಅಲೆಗಳು ಬರುತ್ತವೆ. ಈ ನೀರಿಗೆ ಮೀನುಗಾರಿಕೆಯಲ್ಲಿ ಅತ್ಯಂತ ಪಾವಿತ್ರ್ಯತೆಯೂ ಇದೆ. ಅದರಲ್ಲಿ ಹಲವು ಬಗೆಯ ಮೀನುಗಳು ಬರುವ ಐತಿಹ್ಯವಿದೆ. ಆದರೆ ಈ ಬಾರಿ ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ. ವ್ಯಾಪಾರ ಮಾಡುತ್ತಿದ್ದರೆ ಕೆಜಿಗೆ ರೂ. 200 ರಷ್ಟಿದೆ. ಆದರೆ ಸಿಕ್ಕ ಮೀನನ್ನು ವ್ಯಾಪಾರ ಮಾಡದೇ , ಈದ್ ಹಬ್ಬ ಇರುವುದರಿಂದ ತಮ್ಮೊಳಗೆ ಹಂಚಿಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…