ಉಳ್ಳಾಲ: ಕಲ್ಲಾಪು ಬಳಿ ಮೀನು ಮಾರಾಟ ನಡೆಸುತ್ತಿರುವ ವ್ಯಾಪಾರಿಯನ್ನು ತಡೆದ ಮೂವರು ಮುಸುಕುಧಾರಿ ತಂಡ ತಲವಾರಿನಿಂದ ಹಲ್ಲೆ ಮಾಡಿದ್ದು, ಟೆಂಪೋದಲ್ಲಿದ್ದ ₹2 ಲಕ್ಷ ದರೋಡೆ ಮಾಡಿದೆ.
ನಗರದ ನೇತ್ರಾವತಿ ಸೇತುವೆ ಸಮೀಪ ಶನಿವಾರ ನಸುಕಿನ ಜಾವ ಈ ಘಟನೆ ನಡೆದಿದೆ. ಉಳ್ಳಾಲ ಮುಕ್ಕಚ್ಚೇರಿ ಹೈದರಾಲಿ ರಸ್ತೆ ನಿವಾಸಿ ಮುಸ್ತಾಫ ದರೋಡೆಗೆ ಒಳಗಾದವರು.
ಕಲ್ಲಾಪು ಸಮೀಪ ಮೀನು ಮಾರಾಟ ಮಾಡುತ್ತಿರುವ ಇವರು ಎಂದಿನಂತೆ ಮನೆಯಿಂದ ಧಕ್ಕೆಗೆ ಟೆಂಪೋ ಮೂಲಕ ಮೀನು ಖರೀದಿಸಲು ತೆರಳುತ್ತಿದ್ದರು. ಈ ವೇಳೆ ತೊಕ್ಕೊಟ್ಟು ಕಡೆಯಿಂದ ಕಾರಿನಲ್ಲಿ ತಂಡವೊಂದು ಟೆಂಪೋವನ್ನು ಹಿಂಬಾಲಿಸಿದೆ. ನೇತ್ರಾವತಿ ಸೇತುವೆ ಸಮೀಪ ಅಡ್ಡಗಟ್ಟಿದೆ. ಬಳಿಕ ನಿರಂತರ ಹಾರನ್ ಹಾಕುವುದನ್ನು ಪ್ರಶ್ನಿಸಲು ಮುಸ್ತಾಫ ಅವರು ಕೆಳಗಿಳಿಯುತ್ತಿದ್ದಂತೆ ಕಾರಿನಲ್ಲಿದ್ದ ಮೂವರಲ್ಲಿ ಇಬ್ಬರು ಮುಸುಕುಧಾರಿಗಳು ತಲವಾರಿನಿಂದ ದಾಳಿ ನಡೆಸಿದ್ದಾರೆ.
ಟೆಂಪೋ ಡ್ಯಾಷ್ ಬೋರ್ಡಿನಲ್ಲಿರಿಸಿದ್ದ ₹2 ಲಕ್ಷ ನಗದನ್ನು ದರೋಡೆ ಮಾಡಿ ಪರಾರಿಯಾಗಿದ್ದಾರೆ. ಗಾಯಾಳು ಮುಸ್ತಾಫ ಅವರನ್ನು ರಸ್ತೆ ಮೂಲಕ ತೆರಳುತ್ತಿದ್ದ ವ್ಯಕ್ತಿಯೊಬ್ಬರು ತೊಕ್ಕೊಟ್ಟು ನೇತಾಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಎಸಿಪಿ ದಿನಕರ್ ಶೆಟ್ಟಿ ನೇತೃತ್ಬದ ಪೊಲೀಸ್ ತಂಡ ತನಿಖೆ ಆರಂಭಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…