ಉಳ್ಳಾಲ: ಮೆಹಂದಿ ಶಾಸ್ತ್ರದ ದಿನ ನಾಪತ್ತೆಯಾಗಿದ್ದ ಮದುಮಗ ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಪುತ್ರ ಕಿಶನ್ ಶೆಟ್ಟಿ ಮೆಹಂದಿ ಶಾಸ್ತ್ರದ ದಿನ ನಾಪತ್ತೆಯಾಗಿದ್ದಾರೆ.
ಭಾನುವಾರ ಮಧ್ಯಾಹ್ನ ಕಿಶನ್ ಶೆಟ್ಟಿ ಅವರು ತನ್ನ ತಂಗಿಗೆ ಮೊಬೈಲ್ ಸಂದೇಶ ಕಳುಹಿಸಿ ನಾನು ಬಳ್ಳಾರಿಯಲ್ಲಿದ್ದೇನೆ. ಇನ್ನು ಮುಂದೆ ಎಂದಿಗೂ ಮನೆಗೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.
ಮೇ 31ರಂದು ರಾತ್ರಿ ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲೆಂದು ಹೋಗಿದ್ದ ಕಿಶನ್ ಶೆಟ್ಟಿ ನಾಪತ್ತೆಯಾಗಿದ್ದರು.
ನಾನು ಬಳ್ಳಾರಿಯಲ್ಲಿ ಇದ್ದು, ಸ್ಕೂಟರ್ ಮೆಲ್ಕಾರ್ ಆರ್‌ಟಿಒ ಕಚೇರಿ ಮುಂದೆ ಇಟ್ಟಿದ್ದೇನೆ. ಆದರೆ ಇನ್ನು ಮುಂದೆ ಎಂದಿಗೂ ಮನೆಗೆ ಬರುವುದಿಲ್ಲ ಎಂದು ಹೇಳಿದ್ದಾನೆ. ತಂಗಿ ಕರೆ ಮಾಡಲು ಯತ್ನಿಸಿದ್ದಾರೆ. ಆದರೆ ಕಿಶನ್ ಶೆಟ್ಟಿ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾನೆ ಎಂದು ಐತಪ್ಪ ಶೆಟ್ಟಿ ಅವರು ಕೊಣಾಜೆ ಠಾಣೆಗೆ ಹೋಗಿ ಕರೆ ಬಂದ ಬಗ್ಗೆ ಮಾಹಿತಿ ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…