Featured

ಉಳ್ಳಾಲ: ಯುವಕ ನೇಣು ಬಿಗಿದು ಆತ್ಮಹತ್ಯೆ – vishwanews24

ಉಳ್ಳಾಲ: ಯುವಕ ನೇಣು ಬಿಗಿದು ಆತ್ಮಹತ್ಯೆ

ಉಳ್ಳಾಲ : ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡಿಪು ಸಮೀಪದ ಕಾರಿನ ಗ್ಯಾರೇಜ್ ನಲ್ಲಿ ನಡೆದಿದೆ.

ಕಂಕನಾಡಿಯ ಕಾಂಚನ ಷೋರೂಮಿನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಮುಡಿಪು ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡವರು.

ಜಯ ಎಂಬವರಿಗೆ ಸೇರಿದ ಮುಡಿಪುವಿನ ಕಾರಿನ ಗ್ಯಾರೇಜ್ ಒಳಗಡೆ ಕಬ್ಬಿಣದ ರಾಡಿಗೆ ನೇಣು ಹಾಕಿಕೊಂಡು ಕೃತ್ಯವೆಸಗಿದ್ದಾರೆ. ನ.20 ರಂದು ಕೆಲಸಕ್ಕೆ ಹೋದವರು ತಡರಾತ್ರಿಯಾದರೂ ಮನೆಗೆ ವಾಪಸ್ಸಾಗದೇ ಇರುವುದನ್ನು ಗಮನಿಸಿ ಮನೆಯ ಸುತ್ತ, ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿ ಬಳಿಕ ನಿತ್ಯ ಕಿಶೋರ್ ಕೆಲಸದಿಂದ ವಾಪಸ್ಸಾಗಿ ಕುಳಿತುಕೊಳ್ಳುವ ಗ್ಯಾರೇಜ್ ಸಮೀಪ ಹುಡುಕಾಡಿದಾಗ ಬೈಕ್ ಪತ್ತೆಯಾಗಿದ್ದು, ಒಳಗೆ ಗಮನಿದಾಗ ನೇಣುಹಾಕಿರುವುದು ಗಮನಕ್ಕೆ ಬಂದಿದೆ. ಕಿಶೋರ್ ಕೆಲಸ ಮಾಡುತ್ತಿದ್ದ ಷೋ ರೂಮಿನ ಸೂಪರ್ ವೈಸರ್ ಆರು ತಿಂಗಳ ಹಿಂದಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಆಪ್ತಸ್ನೇಹಿತರಾಗಿದ್ದ ಕಿಶೋರ್ ಇದೇ ಘಟನೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

20 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

20 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

21 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

21 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

21 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

21 hours ago