Featured

ಉಳ್ಳಾಲ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ : ಪವಾಡಸದೃಶವಾಗಿ  ಪಾರಾದ ವೈದ್ಯಕೀಯ ವಿದ್ಯಾರ್ಥಿಗಳು – Vishwanews24

ಉಳ್ಳಾಲ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ : ಪವಾಡಸದೃಶವಾಗಿ  ಪಾರಾದ ವೈದ್ಯಕೀಯ ವಿದ್ಯಾರ್ಥಿಗಳು

ಉಳ್ಳಾಲ: ಕಾರೊಂದು ವಿದ್ಯುತ್‌ ಕಂಬಕ್ಕೆ ಬಡಿದು ರಸ್ತೆ ಬದಿಯಲ್ಲಿ ಹಾಕಿದ್ದ ಕಬ್ಬಿಣ ತಡೆಬೇಲಿಗೆ ಸಿಲುಕಿ ತಲೆಕೆಳಗಾಗಿ ನಿಂತ ಘಟನೆ ತೊಕ್ಕೊಟ್ಟು ಬಬ್ಬುಕಟ್ಟೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಈ ಕಾರು ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಪವಾಡಸದೃಶವಾಗಿ ಪಾರಾಗಿದ್ದಾರೆ. ಅಪಘಾತದಿಂದ ಎಚ್‌.ಟಿ. ಲೈನ್‌ ವಿದ್ಯುತ್‌ ಕಂಬ ಮುರಿದು ಬಿದ್ದಿದೆ. ಅಪಘಾತದಿಂದಾಗಿ ಈ ಪರಿಸರದ ಜನರಿಗೆ ಭಾನುವಾರ ಮಧ್ಯಾಹ್ನದವರೆಗೆ ವಿದ್ಯುತ್‌ ಸರಬರಾಜು ಕಡಿತಗೊಂಡಿತ್ತು.

ಕಾರಿನಲ್ಲಿ ದೇರಳಕಟ್ಟೆಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ತೊಕ್ಕೊಟ್ಟು ಕಡೆಯಿಂದ ದೇರಳಕಟ್ಟೆಗೆ ಸಾಗುತ್ತಿದ್ದಾಗ ಟಿಪ್ಪರ್‌ ಒಂದನ್ನು ಓವರ್‌ಟೇಕ್‌ ಮಾಡುವ ಸಂದರ್ಭಟಿಪ್ಪರ್‌ ಚಾಲಕ ಲಾರಿಯನ್ನು ಬಲಕ್ಕೆ ತಿರುಗಿಸಿದ್ದಾನೆ. ಈ ವೇಳೆ ಅಪಘಾತದಿಂದ ತಪ್ಪಿಸಲು ಕಾರಿನ ಚಾಲಕ ಎಡಕ್ಕೆ ತಿರುಗಿಸಿದ್ದಾನೆ.

ಇದರಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್‌ ಕಂಬಕ್ಕೆ ಬಡಿದು ರಸ್ತೆ ಬದಿಯಲ್ಲಿ ಹಾಕಿದ್ದ ಕಬ್ಬಿಣ ತಡೆಬೇಲಿಗೆ ಸಿಲುಕಿ ತಲೆಕೆಳಗಾಗಿ ನಿಂತಿದೆ. ಇನ್ನು ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

13 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago