ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ
ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ನಾರ್ಲಪಡೀಲ್‌ನಲ್ಲಿ ನಡೆದಿದೆ.
ನಾರ್ಲಪಡೀಲ್ ನಿವಾಸಿ ರಂಜಿತ್ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಿವಾಹಿತರಾಗಿರುವ ರಂಜಿತ್ ಅವರಿಗೆ ಆರು ತಿಂಗಳ ಮಗುವೊಂದಿದೆ. ತಾಯಿಗೆ ಊಟ ಮಾಡಲು ತಿಳಿಸಿದ ರಂಜಿತ್ ಬಳಿಕ ಮನೆಯೊಳಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಇನ್ನು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ನಿಖರ ಕಾರಣವೇನು ಎಂಬುವುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
