ಉಳ್ಳಾಲ : ಶಾಲೆಯ ಆವರಣಗೋಡೆ ಕುಸಿದ ಪರಿಣಾಮ ಹರೇಕಳ ಹಾಜಬ್ಬ ಶಾಲೆಯ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿದ ಘಟನೆ ಹರೇಕಳದ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಮೃತರನ್ನು ನ್ಯೂಪಡ್ಪು ನಿವಾಸಿ ಸಿದ್ದೀಕ್– ಜಮೀಲಾ ದಂಪತಿಯ ಪುತ್ರಿ ಶಾಜಿಯಾ (7) ಎಂದು ಗುರುತಿಸಲಾಗಿದೆ.
ಹರೇಕಳ ಹಾಜಬ್ಬ ಅವರ ಪ್ರಯತ್ನದಿಂದ ಆರಂಭವಾದ ಈ ಶಾಲೆಯಲ್ಲಿ ಮುಡಿಪು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್) ಶಿಬಿರ ನಡೆಯುತ್ತಿತ್ತು. ನ್ಯೂಪಡ್ಪು ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಶಾಜಿಯಾ ಶಿಬಿರ ನಡೆಯುತ್ತಿದ್ದ ಸ್ಥಳಕ್ಕೆ ಹೋಗಿದ್ದಳು. ಬಾಲಕಿಯು ಗೇಟಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಆವರಣ ಗೋಡೆಯು ಆಕೆಯ ಮೇಲೆ ಕುಸಿದು ಬಿದ್ದಿತ್ತು. ಮಳೆಯಿಂದಾಗಿ ಆವರಣಗೋಡೆ ಒದ್ದೆಯಾಗಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…