Featured

ಉಳ್ಳಾಲ : ಶಾಲೆಯ ಆವರಣಗೋಡೆ  ಕುಸಿದು ವಿದ್ಯಾರ್ಥಿನಿ ಸಾವು – vishwanews24

ಉಳ್ಳಾಲ : ಶಾಲೆಯ ಆವರಣಗೋಡೆ ಕುಸಿದು ವಿದ್ಯಾರ್ಥಿನಿ ಸಾವು

ಉಳ್ಳಾಲ  : ಶಾಲೆಯ ಆವರಣಗೋಡೆ ಕುಸಿದ ಪರಿಣಾಮ ಹರೇಕಳ ಹಾಜಬ್ಬ ಶಾಲೆಯ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿದ ಘಟನೆ ಹರೇಕಳದ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಮೃತರನ್ನು ನ್ಯೂಪಡ್ಪು ನಿವಾಸಿ ಸಿದ್ದೀಕ್‌– ಜಮೀಲಾ ದಂಪತಿಯ ಪುತ್ರಿ ಶಾಜಿಯಾ (7) ಎಂದು ಗುರುತಿಸಲಾಗಿದೆ.

ಹರೇಕಳ ಹಾಜಬ್ಬ ಅವರ ಪ್ರಯತ್ನದಿಂದ ಆರಂಭವಾದ ಈ ಶಾಲೆಯಲ್ಲಿ ಮುಡಿಪು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್‌) ಶಿಬಿರ ನಡೆಯುತ್ತಿತ್ತು. ನ್ಯೂಪಡ್ಪು ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಶಾಜಿಯಾ ಶಿಬಿರ ನಡೆಯುತ್ತಿದ್ದ ಸ್ಥಳಕ್ಕೆ ಹೋಗಿದ್ದಳು. ಬಾಲಕಿಯು ಗೇಟಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಆವರಣ ಗೋಡೆಯು ಆಕೆಯ ಮೇಲೆ ಕುಸಿದು ಬಿದ್ದಿತ್ತು. ಮಳೆಯಿಂದಾಗಿ ಆವರಣಗೋಡೆ ಒದ್ದೆಯಾಗಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

15 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

16 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

18 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

18 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

19 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

19 hours ago