Featured

ಉಳ್ಳಾಲ: ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು – vishwanews24

ಉಳ್ಳಾಲ: ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

 ಉಳ್ಳಾಲ : ಕೊಕ್ಯ ಸಮೀಪದ ಕನೀರುತೋಟದಲ್ಲಿ ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ಕೊಲ್ಯ ಕನೀರುತೋಟದ ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ್ (46) ಎಂದು ಗುರುತಿಸಲಾಗಿದೆ.

ಯಶೋಧರ್ ಅವರು ಇಂದು ಬೆಳಗ್ಗೆ ತನ್ನ ಮನೆ ಸಮೀಪದ ತೋಟವೊಂದರ ಬಳಿ ಶೇಂದಿ ತೆಗೆಯುತ್ತಿದ್ದಾಗ ಆಯತಪ್ಪಿ ತೆಂಗಿನ ಮರದಿಂದ ಕೆಳಗೆ ಬಿದ್ದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೆ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.

ಹಲವು ವರ್ಷಗಳಿಂದ ಯಶೋಧರ್ ಶೇಂದಿ ತೆಗೆಯುವ ಕೆಲಸ ಮಾಡುತ್ತಿದ್ದರು. ಈ ಹಿಂದೆ ಕೆಲಸದ ವೇಳೆ ಕಡಿಮೆ ರಕ್ತದೊತ್ತಡದಿಂದಾಗಿ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಹೀಗಾಗಿ ಈಗಲೂ ಅದೇ ಕಾರಣದಿಂದ ಆಯತಪ್ಪಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.

ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಯಶೋಧರ್ ತಮ್ಮ ಕುಟುಂಬದ ಆಧಾರಸ್ತಂಭವಾಗಿದ್ದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

8 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

10 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

11 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

11 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

11 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

11 hours ago